ವಿಜಯಪುರ: ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಕುರಿತು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಹಿರಿಯ ನಾಯಕರನ್ನು ಕಡೆಗಣಿಸಿ ಹೊಸ ರೀತಿಯ ಆಡಳಿತ ನಡೆಸುವ ಪ್ರಯತ್ನ ನಡೆಯುತ್ತಿದೆ. ಇದು ಗುಂಡಾ ಸಚಿವ ಸಂಪುಟ. ರಾಜ್ಯದಲ್ಲಿ ಗುಂಡಾ ಸಂಸ್ಕೃತಿಗೆ ಉತ್ತೇಜನ ನೀಡುವ ರೀತಿಯಲ್ಲಿ ಸಚಿವ ಸಂಪುಟ ರಚಿಸಲಾಗಿದೆ" ಎಂದು ವಾಗ್ದಾಳಿ ನಡೆಸಿದರು.
"ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಅವರ ಪ್ರಭಾವದಿಂದ ಈ ಸಚಿವ ಸಂಪುಟ ರಚನೆಯಾಗಿದೆ. ಸಂಪುಟದಲ್ಲಿ ಕ್ರಿಮಿನಲ್ ಹಿನ್ನೆಲೆಯುಳ್ಳವರಿಗೆ ಅವಕಾಶ ನೀಡಲಾಗಿದೆ" ಎಂದು ವ್ಯಂಗ್ಯವಾಡಿದರು. ಅಷ್ಟೇ ಅಲ್ಲದೆ, "ಮುಖ್ಯಮಂತ್ರಿ ಒಳಗೊಂಡಂತೆ ಸರ್ಕಾರದ ಹಲವು ನಾಯಕರು ಭ್ರಷ್ಟಾಚಾರದ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ" ಎಂದು ಯತ್ನಾಳ್ ಗಂಭೀರ ಆರೋಪ ಮಾಡಿದರು.
ಇದೇ ವೇಳೆ, ಶಾಸಕರ ಸಾಲು ಸಾಲು ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, "ರಾಜೀನಾಮೆ ನೀಡುವುದಾಗಿ ಹೇಳುವುದು ಕೇವಲ ನಾಟಕ. ಇಂದಿನ ದಿನಗಳಲ್ಲಿ ಶಾಸಕನಾಗುವುದೇ ದುಸ್ತರವಾಗಿರುವಾಗ, ಜನರನ್ನು ಹಾಗೂ ಪಕ್ಷವನ್ನು ಹೆದರಿಸಲು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ" ಎಂದು ಲೇವಡಿ ಮಾಡಿದರು.
PublicNext
04/08/2026 05:16 pm
LOADING...