ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತರ ಸಮ್ಮುಖದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕಿ ಶಾರದಾ ಪೂರ್ಯನಾಯ್ಕ್

ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರು ತಮ್ಮ ಕಚೇರಿಯಲ್ಲಿ ತುಂಗ ಏತ ನೀರಾವರಿ ಯೋಜನೆ ಹಾಗೂ ಹೊಸಹಳ್ಳಿ ಏತ ನೀರಾವರಿ ಯೋಜನೆಯ ವ್ಯಾಪ್ತಿಗೆ ಒಳಪಡುವ ಕೆರೆಗಳಿಗೆ ನೀರು ತುಂಬಿಸುವ ಕುರಿತು ನೀರಾವರಿ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಹಾರನಹಳ್ಳಿ ಮತ್ತು ಕುಂಸಿ ಭಾಗದ ರೈತರು ಉಪಸ್ಥಿತರಿದ್ದು, ಕೆರೆಗಳಿಗೆ ಸಮರ್ಪಕವಾಗಿ ನೀರು ಹರಿಯದಿರುವುದು, ನೀರಿನ ಹಂಚಿಕೆಯಲ್ಲಿ ಉಂಟಾಗಿರುವ ಸಮಸ್ಯೆಗಳು ಹಾಗೂ ಮುಂಬರುವ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರಿನ ಲಭ್ಯತೆ ಕುರಿತು ತಮ್ಮ ಅಹವಾಲುಗಳನ್ನು ಶಾಸಕರ ಗಮನಕ್ಕೆ ತಂದರು.

ರೈತರ ಅಹವಾಲುಗಳನ್ನು ಆಲಿಸಿದ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರು, ತುಂಗ ಮತ್ತು ಹೊಸಹಳ್ಳಿ ಏತ ನೀರಾವರಿ ಯೋಜನೆಗಳ ವ್ಯಾಪ್ತಿಗೆ ಒಳಪಡುವ ಎಲ್ಲಾ ಕೆರೆಗಳಿಗೂ ಯಾವುದೇ ತಾರತಮ್ಯವಿಲ್ಲದೆ ನೀರು ತುಂಬಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ರೈತರ ಹಿತಾಸಕ್ತಿಗೆ ಆದ್ಯತೆ ನೀಡಿ ಯೋಜನೆಯ ಉದ್ದೇಶ ಸಂಪೂರ್ಣವಾಗಿ ಈಡೇರುವಂತೆ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

ನೀರಿನ ಹರಿವು, ಕೆರೆಗಳ ಭರ್ತಿ ಪ್ರಗತಿ ಹಾಗೂ ತಾಂತ್ರಿಕ ಅಡಚಣೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು, ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಂಡು ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಸೂಚಿಸಿದರು. ನೀರಾವರಿ ವ್ಯವಸ್ಥೆಯಲ್ಲಿ ಸಮನ್ವಯ ಕಾಪಾಡಿಕೊಂಡು ಪ್ರತಿಯೊಂದು ಕೆರೆಯೂ ಭರ್ತಿಯಾಗುವಂತೆ ಕಾರ್ಯಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ನೀರಾವರಿ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ಹಾರನಹಳ್ಳಿ ಮತ್ತು ಕುಂಸಿ ಭಾಗದ ರೈತರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

04/08/2026 05:29 pm

Cinque Terre

1.84 K

Cinque Terre

0

ಸಂಬಂಧಿತ ಸುದ್ದಿ