ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಗಾರ ಖುರ್ದ್ ಎಥೆನಾಲ್ ಘಟಕ ಬಂದ್‌ಗೆ ಆಗ್ರಹ : ಬೆಳಗಾವಿ ಡಿಸಿ ಆಫೀಸ್ ಮುಂದೆ ಉಪವಾಸ ಸತ್ಯಾಗ್ರಹ!

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಖುರ್ದ್ ಗ್ರಾಮದಲ್ಲಿರುವ ಎಥೆನಾಲ್ ಘಟಕವನ್ನು ತಕ್ಷಣವೇ ಬಂದ್ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಗ್ರಾಮಸ್ಥರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.

"ಉಗಾರ ಖುರ್ದ್ ಗ್ರಾಮದಲ್ಲಿರುವ ಎಥೆನಾಲ್ ಘಟಕವನ್ನು ಅನಧಿಕೃತವಾಗಿ ನಿರ್ಮಿಸಲಾಗಿದೆ. ಈ ಘಟಕದಿಂದಾಗಿ ವ್ಯಾಪಕ ಪರಿಸರ ಮಾಲಿನ್ಯ ಉಂಟಾಗುತ್ತಿದ್ದು, ಸಣ್ಣ ಮಕ್ಕಳು ಚರ್ಮರೋಗಕ್ಕೆ ತುತ್ತಾಗುತ್ತಿದ್ದಾರೆ. ಸಾರ್ವಜನಿಕರ ಆರೋಗ್ಯದ ಮೇಲೆ ಇದು ತೀವ್ರ ದುಷ್ಪರಿಣಾಮ ಬೀರುತ್ತಿದೆ" ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸಾರ್ವಜನಿಕರ ಜೀವ ಮತ್ತು ಆರೋಗ್ಯದ ರಕ್ಷಣೆಗೆ ಜಿಲ್ಲಾಡಳಿತ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.

Edited By :
PublicNext

PublicNext

04/08/2026 05:39 pm

Cinque Terre

8.36 K

Cinque Terre

0

ಸಂಬಂಧಿತ ಸುದ್ದಿ