ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಘಟ್ಟದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ!

ಕೋಲಾರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) ಶ್ರೀನಿವಾಸಪುರ-2 ಯೋಜನಾ ಕಚೇರಿ ವ್ಯಾಪ್ತಿಯ ಅಣ್ಣೆಹಳ್ಳಿ ವಲಯದ ಮಣಿಘಟ್ಟ ಕಾರ್ಯಕ್ಷೇತ್ರದಲ್ಲಿ ಇತ್ತೀಚೆಗೆ ಒಕ್ಕೂಟದ ಪದಾಧಿಕಾರಿಗಳಿಗಾಗಿ ವಿಶೇಷ ತರಬೇತಿ ಕಾರ್ಯಾಗಾರವನ್ನು ಸ್ಥಳೀಯ ಹಾಲಿನ ಡೈರಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಾಗಾರದಲ್ಲಿ ಒಕ್ಕೂಟದ ಸಭೆಗಳನ್ನು ಸಮರ್ಪಕವಾಗಿ ನಡೆಸುವುದು ಹೇಗೆ, ಸ್ವಸಹಾಯ ತಂಡಗಳ ಕಾರ್ಯವೈಖರಿಯ ಹಿನ್ನೆಲೆ, ಯೋಜನೆಯ ವಿವಿಧ ಜನಪರ ಕಾರ್ಯಕ್ರಮಗಳು, ತಂಡಗಳ ಗುಣಮಟ್ಟವನ್ನು ಕಾಯ್ದುಕೊಳ್ಳುವ ಕ್ರಮಗಳು ಹಾಗೂ ಬಿ.ಸಿ. ಕಾರ್ಯಕ್ರಮಗಳ ಅನುಷ್ಠಾನದ ಕುರಿತು ಪದಾಧಿಕಾರಿಗಳಿಗೆ ಸುದೀರ್ಘ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಬೆಂಗಳೂರು ಪ್ರಾದೇಶಿಕ ನಿರ್ದೇಶಕ ಸೀನಪ್ಪ, ಶ್ರೀನಿವಾಸಪುರ-2 ಕ್ಷೇತ್ರದ ಯೋಜನಾಧಿಕಾರಿ ಕಾಂತಪ್ಪ, ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯರು, ಜಿಲ್ಲಾ ವಿಚಕ್ಷಣಾಧಿಕಾರಿಗಳು, ಮೇಲ್ವಿಚಾರಕರು ಹಾಗೂ ವಲಯದ ಸೇವಾ ಪ್ರತಿನಿಧಿಗಳು ಭಾಗವಹಿಸಿದ್ದರು.

ಸುಮಾರು 35ಕ್ಕೂ ಹೆಚ್ಚು ಒಕ್ಕೂಟ ಪದಾಧಿಕಾರಿಗಳು ತರಬೇತಿಯಲ್ಲಿ ಪಾಲ್ಗೊಂಡು, ತಮ್ಮ ತಮ್ಮ ಗ್ರಾಮಗಳಲ್ಲಿ ಮಾದರಿ ಒಕ್ಕೂಟ ಸಭೆಗಳನ್ನು ಯಶಸ್ವಿಯಾಗಿ ನಡೆಸಲು ಅಗತ್ಯವಾದ ತಾಂತ್ರಿಕ ಮಾರ್ಗದರ್ಶನ ಮತ್ತು ಉಪಯುಕ್ತ ಮಾಹಿತಿಗಳನ್ನು ಪಡೆದುಕೊಂಡರು.

Edited By :
Kshetra Samachara

Kshetra Samachara

04/08/2026 05:42 pm

Cinque Terre

920

Cinque Terre

0

ಸಂಬಂಧಿತ ಸುದ್ದಿ