ಹಾನಗಲ್: ನೂತನವಾಗಿ ಸಚಿವ ಸಂಪುಟ ಸೇರ್ಪಡೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಾವೇರಿ ಶಾಸಕ ರುದ್ರಪ್ಪ ಲಮಾಣಿ ಅವರನ್ನು ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಅವರು ಮಂಗಳವಾರ ಬೆಂಗಳೂರಿನ ಶಾಸಕರ ಭವನದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಈ ವೇಳೆ ಸಚಿವರಿಗೆ ಗೌರವ ಸಲ್ಲಿಸಿ ಮಾತನಾಡಿದ ಶಾಸಕ ಶ್ರೀನಿವಾಸ ಮಾನೆ, "ಹಾವೇರಿ ಜಿಲ್ಲೆಯ ಅಭಿವೃದ್ಧಿಗೆ ಹಾಗೂ ಪಕ್ಷದ ಸಂಘಟನೆಗೆ ಎಲ್ಲ ರೀತಿಯ ಅಗತ್ಯ ಸಹಕಾರ ನೀಡಲಾಗುವುದು. ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕಿದ್ದು, ಈ ನಿಟ್ಟಿನಲ್ಲಿ ಸಂಪೂರ್ಣ ಬೆಂಬಲ ನೀಡಲಾಗುವುದು" ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಿಗ್ಗಾಂವಿ-ಸವಣೂರು ಕ್ಷೇತ್ರದ ಶಾಸಕ ಯಾಸೀರಖಾನ್ ಪಠಾಣ್ ಉಪಸ್ಥಿತರಿದ್ದು, ನೂತನ ಸಚಿವರಿಗೆ ಶುಭ ಹಾರೈಸಿದರು.
Kshetra Samachara
04/08/2026 05:45 pm
LOADING...