ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ಮೊದಲ ಸಭೆಯಲ್ಲೇ ನೂತನ ಸಚಿವರಿಂದ ಅಧಿಕಾರಿಗಳಿಗೆ ಕ್ಲಾಸ್ 

ಚಾಮರಾಜನಗರ : ಸಚಿವರಾಗಿ ಮೊದಲ ಬಾರಿಗೆ ಚಾಮರಾಜನಗರಕ್ಕೆ ಆಗಮಿಸಿದ ಸಿ.ಪುಟ್ಟರಂಗಶೆಟ್ಟಿ ಅಧಿಕಾರಿಗಳೊಂದಿಗೆ ಮೊದಲ ಸಭೆ ನಡೆಸಿ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗಿನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ಸಿ‌‌ಪುಟ್ಟರಂಗ ಶೆಟ್ಟಿ, ಜಿಲ್ಲೆಯಲ್ಲಿ ತಲೆದೂರಿರುವ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಕೂಡಲೇ ಸಭೆ ನಡೆಸಿ ಸರ್ಕಾರಕ್ಕೆ ಮಾಹಿತಿ ನೀಡುವಂತೆ ಮುಖ್ಯ ಮಂತ್ರಿ ಅವರು ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಜಾಗೃತರಾಗಬೇಕು ಎಂದರು.

ಅಧಿಕಾರಿಗಳು ಕಡ್ಡಾಯವಾಗಿ ಸರ್ಕಾರದ ಸೂಚನೆಯಂತೆ ಶಿಷ್ಟಾಚಾರ ಪಾಲನೆ ಮಾಡ ಬೇಕು. ಶಿಷ್ಟಾಚಾರ ಉಲ್ಲಂಘಸಿದ ಅಧಿಕಾರಿ ಗಳ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮವಹಿಸ ಲಾಗುವುದು. ಪ್ರಗತಿಪರಿಶೀಲನಾ ಸಭೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಕಡ್ಡಾಯ ವಾಗಿ ಹಾಜರಾಗಬೇಕು. ಅಧಿಕಾರಿಗಳು ಸಬೂಬು ಹೇಳುವುದನ್ನು ಬಿಡಬೇಕು ಎಂದು ತಾಕೀತು ಮಾಡಿದರು.

ಅಧಿಕಾರಿಗಳು ಸಭೆಗೆ ಬರುವಾಗ ಇಲಾಖೆ ಯ ಸಂಪೂರ್ಣ ಮಾಹಿತಿಯನ್ನು ತರಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಉದ್ಬವಿಸಿದೆ. ಈ ಸಮಸ್ಯೆ ಪರಿಹಾರಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದ ಅವರು, ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಸಮಸ್ಯೆ ಉದ್ಬವಿಸದಂತೆ ಎಚ್ಚೆತ್ತು ಮೇವಿಗೆ ಸಮಸ್ಯೆ ಇರುವ ಪ್ರದೇಶಗಳಲ್ಲಿ 

ಮೇವು ಕೇಂದ್ರ ತೆರೆಯಲು  ಕ್ರಮವಹಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಉದ್ಬವಿಸಿರುವ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಮಾಹಿತಿ ಪಡೆದುಕೊಂಡ ಸಚಿವ ಸಿ.ಪುಟ್ಟರಂಗಶೆಟ್ಟಿ, ಎಲ್ಲೆಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸಿದೆ ಅದನ್ನು ಗುರುತಿಸಿ, ಮುಂದಿನ‌ ದಿನಗಳಲ್ಲಿ ಆ ಸಮಸ್ಯೆ ಉದ್ಬವಿಸದಂತೆ ಕ್ರಮವಹಿಸಲು ಸೂಚಿಸಿದರು.

Edited By : PublicNext Desk
Kshetra Samachara

Kshetra Samachara

04/08/2026 06:58 pm

Cinque Terre

500

Cinque Terre

0

ಸಂಬಂಧಿತ ಸುದ್ದಿ