ಬೆಳಗಾವಿ:ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆನ್ನಲಾದ ರಾಜ್ಯ ಕಾಂಗ್ರೆಸ್ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಆರೋಪಿಸಿ, ಬೆಳಗಾವಿ ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.ಕನ್ನಡ ಸಾಹಿತ್ಯ ಭವನದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಬಿಜೆಪಿ ಕಾರ್ಯಕರ್ತರು, ರಾಣಿ ಚೆನ್ನಮ್ಮ ವೃತ್ತದ ಮಾರ್ಗವಾಗಿ ಸಾಗಿ ಜಿಲ್ಲಾಧಿಕಾರಿ (ಡಿಸಿ) ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು. ಭ್ರಷ್ಟಾಚಾರ ಪ್ರಕರಣಗಳ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ಸಚಿವರುಗಳಾದ ಬಿ. ನಾಗೇಂದ್ರ, ಬಿ.ಝಡ್.
ಜಮೀರ್ ಅಹಮದ್ ಖಾನ್ ಹಾಗೂ ಸಂತೋಷ್ ಲಾಡ್ ಅವರಿಗೆ ಸಂಪುಟದಲ್ಲಿ ಮತ್ತೆ ಸಚಿವ ಸ್ಥಾನ ನೀಡಲಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ತಕ್ಷಣವೇ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ರಾಜೀನಾಮೆ ಪಡೆಯಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಲಿಂಗರಾಜ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಮಾಜಿ ಶಾಸಕರುಗಳಾದ ಸಂಜಯ ಪಾಟೀಲ, ವಿಶ್ವನಾಥ ಪಾಟೀಲ, ಮಹಾಂತೇಶ ದೊಡ್ಡಗೌಡ್ರ, ಅರವಿಂದ ಪಾಟೀಲ, ಮಹಾನಗರ ಜಿಲ್ಲಾಧ್ಯಕ್ಷೆ ಗೀತಾ ಸುತಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಮಾದಮ್ಮನವರ, ಸಂದೀಪ್ ದೇಶಪಾಂಡೆ, ಧನಶ್ರೀ ದೇಸಾಯಿ ಸೇರಿದಂತೆ ಪ್ರಮುಖ ಮುಖಂಡರು, ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
PublicNext
04/08/2026 07:02 pm
LOADING...