ಮಡಿಕೇರಿ: ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾರತ್ ಜೋಡೋ ಯುವ ಸಂಘ ಸ್ಥಾಪನೆ ಸಂಬಂಧ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯುವ ಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಮುದಾಯಿಕ, ಸಾಮಾಜಿಕ ಸಾಮರಸ್ಯವನ್ನು-ಉತ್ತೇಜಿಸುವಲ್ಲಿ ಸರ್ಕಾರ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ಉದ್ದೇಶಿಸಿದ್ದು, ಆ ನಿಟ್ಟಿನಲ್ಲಿ ಪಂಚಾಯತ್ ರಾಜ್ ಹಾಗೂ ನಗರಾಭಿವೃದ್ಧಿ, ಪೌರಾಡಳಿತ ಇಲಾಖೆ ಅಧಿಕಾರಿಗಳು ತುರ್ತು ಕ್ರಮವಹಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಪ್ರತೀ ಗ್ರಾ.ಪಂ.ವ್ಯಾಪ್ತಿಯಲ್ಲಿ ತಲಾ ಒಂದು ಭಾರತ್ ಜೋಡೋ ಯುವ ಸಂಘ ಸ್ಥಾಪಿಸಬೇಕಿದೆ. ಪ್ರತೀ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಾಸರಿ 4 ಸಾವಿರ ಜನಸಂಖ್ಯೆಗೆ ಒಂದು ಸಂಘ, ಪ್ರತೀ ಪುರಸಭೆಯಲ್ಲಿ ಸರಾಸರಿ 6 ಸಾವಿರ ಜನಸಂಖ್ಯೆಗೆ ಒಂದು ಸಂಘ, ನಗರಸಭೆ ವ್ಯಾಪ್ತಿಯಲ್ಲಿ ಸರಾಸರಿ 8 ಸಾವಿರ ಜನಸಂಖ್ಯೆಗೆ ಒಂದು ಸಂಘ ಸ್ಥಾಪಿಸಬೇಕಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ವಿವರಿಸಿದರು.
Kshetra Samachara
04/08/2026 07:22 pm
LOADING...