ಹುಬ್ಬಳ್ಳಿ: ಸಿಎಂ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ನೂತನವಾಗಿ ಸಚಿವರಾದ ಸಂತೋಷ್ ಲಾಡ್ ಹಾಗೂ ಯೂತ್ ಕಾಂಗ್ರೆಸ್ ಪ್ರತಿನಿಧಿಯಾಗಿ ಸಚಿವರಾದ ರಿಜ್ವಾನ್ ಅರ್ಷದ್ ಅವರಿಗೆ ಹುಬ್ಬಳ್ಳಿಯ ಯುವ ಕಾಂಗ್ರೆಸ್ ಮುಖಂಡ ಪ್ರವೀಣ ಕಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ.
ಕಲಘಟಗಿ ಕ್ಷೇತ್ರದಿಂದ ಶಾಸಕರಾಗಿ, ಕಾರ್ಮಿಕ ಸಚಿವರಾಗಿ ಸಾಕಷ್ಟು ಜನಪರ ಕಾರ್ಯವನ್ನು ಮಾಡಿರುವ ಸಚಿವ ಸಂತೋಷ್ ಲಾಡ್ ಅವರಿಗೆ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಅವಕಾಶ ದೊರೆತಿರುವುದು ಧಾರವಾಡ ಜಿಲ್ಲೆಯ ಜನತೆಗೆ ಸಾಕಷ್ಟು ಸಂತೋಷವನ್ನುಂಟು ಮಾಡಿದೆ. ಯೂತ್ ಕಾಂಗ್ರೆಸ್ ಮೂಲಕ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಶ್ರಮಿಸಿದ ರಿಜ್ವಾನ್ ಅರ್ಷದ್ ಅವರಿಗೆ ಸಚಿವ ಸ್ಥಾನ ದೊರೆತಿರುವುದು ಯುವ ಸಮುದಾಯಕ್ಕೆ ಸ್ಫೂರ್ತಿಯ ಸೆಲೆಯಾಗಿದೆ. ನಿಮ್ಮೆಲ್ಲರ ಜನಪರ ಕಾರ್ಯ ಹೆಚ್ಚು ಹೆಚ್ಚು ಜನರಿಗೆ ತಲುಪಲಿ ಎಂದು ಶುಭ ಹಾರೈಸಿದ್ದಾರೆ.
ಶುಭಾಶಯ ಕೋರುವವರು..
ಶ್ರೀ ಪ್ರವೀಣ ಕಟ್ಟಿ
ಕಾಂಗ್ರೆಸ್ ಯುವ ಮುಖಂಡರು ಹಾಗೂ ಉದ್ಯಮಿಗಳು ಹುಬ್ಬಳ್ಳಿ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
04/08/2026 07:25 pm
LOADING...