ಮಡಿಕೇರಿ: ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯಸೌಧದಲ್ಲಿ ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಪ್ರಶಾಂತ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿತು.
ಯುವ ನಿಧಿ-ಯುವ ನಿಧಿ ಯೋಜನೆ ಕುರಿತು ಹೆಚ್ಚಿನ ಪ್ರಚಾರವಾಗಬೇಕು. ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿ ಯೋಜನೆಯ ಉಪಯೋಗವನ್ನು ಮಾಡಿಕೊಳ್ಳಲು ತಿಳಿಸಲು ಸಭೆಯಲ್ಲಿ ಚರ್ಚಿಸಲಾಯಿತು. ಯಾರೆಲ್ಲಾ ಯುವ ನಿಧಿ ಯೋಜನೆಯಡಿ ಅರ್ಹರಾಗಿರುತ್ತಾರೆ ಎಂಬುದನ್ನು ಸಭೆಯಲ್ಲಿ ಉದ್ಯೋಗ ವಿನಿಮಯಾಧಿಕಾರಿಗಳು ಮಾಹಿತಿ ನೀಡಿದರು.
2024-25 ರಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಾಗಿರಬೇಕು (ಪದವಿ-3000, ಡಿಪ್ಲೊಮಾ -1500.) ಸ್ನಾತಕೋತ್ತರ ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ರೂ.3 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಎಲ್ಲಾ ಕಾಲೇಜುಗಳಿಗೆ ನಿರಂತರವಾಗಿ ಭೇಟಿ ನೀಡಿ ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕಿ ಇದರಿಂದ ಯೋಜನೆಯ ಸದುಪಯೋಗವಾಗುತ್ತದೆ. ರೇಡಿಯೋ ಪತ್ರಿಕೆ ಹಾಗೂ ದೃಶ್ಯಮಾಧ್ಯಮಗಳಲ್ಲಿ ಯೋಜನೆಯ ಕುರಿತು ಜಾಹೀರಾತು ನೀಡಲು ಪೊನ್ನಂಪೇಟೆ ತಾ. ಪಂ. ಗ್ಯಾರಂಟಿ ಅಧ್ಯಕ್ಷರಾದ ಪ್ರಶಾಂತ್ ತಿಳಿಸಿದರು.
Kshetra Samachara
04/08/2026 07:28 pm
LOADING...