ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿ: 'ಸಂಪೂರ್ಣ ಸುರಕ್ಷಾ' ಯೋಜನೆ ಪರಿಶೀಲನೆ; ವೆಲ್ ನೆಸ್ಟ್ ಆಸ್ಪತ್ರೆಗೆ ಭೇಟಿ ನೀಡಿದ ಅಧಿಕಾರಿಗಳು!

ಶಿರಸಿ: ಸಂಪೂರ್ಣ ಸುರಕ್ಷಾ ಹಾಗೂ ಆರೋಗ್ಯ ರಕ್ಷಾ ವಿಮಾ ಯೋಜನೆಯಡಿ ನೆಟ್‌ವರ್ಕ್ ಆಸ್ಪತ್ರೆಗಳ ಸೇವೆಗಳನ್ನು ಪರಿಶೀಲಿಸಲು ಮತ್ತು ಸದಸ್ಯರಿಗೆ ಮತ್ತಷ್ಟು ಗುಣಮಟ್ಟದ ಚಿಕಿತ್ಸೆ ಒದಗಿಸುವ ಉದ್ದೇಶದಿಂದ, ಶಿರಸಿ ತಾಲೂಕಿನ ನೂತನ 'ವೆಲ್ ನೆಸ್ಟ್' ಆಸ್ಪತ್ರೆಗೆ ಹಿರಿಯ ಅಧಿಕಾರಿಗಳ ತಂಡ ಪರಿಶೀಲನಾ ಭೇಟಿ ನೀಡಿ ಸಮಾಲೋಚನೆ ನಡೆಸಿತು.

ಸಭೆಯಲ್ಲಿ ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ಗಣೇಶ ಬಿ. ಹಾಗೂ ಸುರಕ್ಷಾ ಯೋಜನಾಧಿಕಾರಿ ನಾರಾಯಣ ಪಾಟಾಳಿ ಭಾಗವಹಿಸಿ, ಆಸ್ಪತ್ರೆಯ ಆಡಳಿತ ಮಂಡಳಿಯ ಜೊತೆ ಸುದೀರ್ಘ ಚರ್ಚೆ ನಡೆಸಿದರು.

ಯೋಜನೆಯ ಫಲಾನುಭವಿಗಳಿಗೆ ಪ್ಯಾಕೇಜ್ ಆಧಾರಿತ ಉನ್ನತ ಮಟ್ಟದ ವೈದ್ಯಕೀಯ ಸೇವೆಗಳನ್ನು ಒದಗಿಸುವುದು, ಆರೋಗ್ಯ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸುವುದು ಹಾಗೂ ವೆಲ್ ನೆಸ್ಟ್ ಆಸ್ಪತ್ರೆಯನ್ನು ಸಂಪೂರ್ಣ ಸುರಕ್ಷಾ ಮತ್ತು ಆರೋಗ್ಯ ರಕ್ಷಾ ವಿಮಾ ಯೋಜನೆಯ ನೆಟ್‌ವರ್ಕ್ ಆಸ್ಪತ್ರೆಯಾಗಿ ಅಧಿಕೃತವಾಗಿ ಸೇರ್ಪಡೆಗೊಳಿಸುವ ಸಂಬಂಧ ಅಧಿಕಾರಿಗಳು ಅಗತ್ಯ ಸಲಹೆ-ಮಾರ್ಗದರ್ಶನ ನೀಡಿದರು.

"ವಿಮಾ ಯೋಜನೆಯ ಸದಸ್ಯರಿಗೆ ಸುಲಭ, ಸರಳ ಹಾಗೂ ಪರಿಣಾಮಕಾರಿ ಆರೋಗ್ಯ ಸೇವೆಗಳು ಯಾವುದೇ ತೊಂದರೆಯಿಲ್ಲದೆ ಲಭ್ಯವಾಗಬೇಕು. ಈ ನಿಟ್ಟಿನಲ್ಲಿ ಯೋಜನೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ" ಎಂದು ಅಧಿಕಾರಿಗಳು ಒತ್ತಿ ಹೇಳಿದರು.

ಈ ಭೇಟಿ ಹಾಗೂ ಸಮಾಲೋಚನೆಯು ಸಂಪೂರ್ಣ ಸುರಕ್ಷಾ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಹೆಜ್ಜೆಯಾಗಿದ್ದು, ಶಿರಸಿ ಭಾಗದ ಜನರಿಗೆ ಉತ್ತಮ ವೈದ್ಯಕೀಯ ಸೇವೆ ಸಿಗಲು ಸಹಕಾರಿಯಾಗಲಿದೆ ಎಂದು ಅಧಿಕಾರಿಗಳು ಭರವಸೆ ವ್ಯಕ್ತಪಡಿಸಿದರು.

Edited By :
Kshetra Samachara

Kshetra Samachara

04/08/2026 07:38 pm

Cinque Terre

2.26 K

Cinque Terre

0

ಸಂಬಂಧಿತ ಸುದ್ದಿ