ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಚಿವ ನರೇಂದ್ರ ಸ್ವಾಮಿ ಮೊದಲ ಕೊಡಗು ಪ್ರವಾಸ – ಅಧಿಕಾರಿಗಳೊಂದಿಗೆ ಸಭೆ

ಮಡಿಕೇರಿ: ರಾಜ್ಯದ ನೂತನ ಸಚಿವರಾದ ನರೇಂದ್ರ ಸ್ವಾಮಿ ಮೊದಲ ಬಾರಿಗೆ ಕೊಡಗು ಜಿಲ್ಲೆಗೆ ಆಗಮಿಸಿದ್ದು, ಜಿಲ್ಲೆಯ

ಅಭಿವೃದ್ಧಿ ಕಾಮಗಾರಿಗಳು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.

ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆದಿರುವ ಸಚಿವರು ರಸ್ತೆ, ಕುಡಿಯುವ ನೀರು, ಮಳೆ ಹಾನಿ, ಪ್ರವಾಸೋದ್ಯಮ, ಕೃಷಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಮಗ್ರ ಪರಿಶೀಲನೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಜನಪ್ರತಿನಿಧಿಗಳು ಮತ್ತು ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ನಿರ್ದೇಶನಗಳನ್ನು ಸಚಿವರು ನೀಡಲಿದ್ದಾರೆ.ನಂತರ ಜಿಲ್ಲೆಯ ಹಾರಂಗಿ ಜಲಾಶಯ, ಗೋಶಾಲೆ, ಮಡಿಕೇರಿಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

Edited By : PublicNext Desk
Kshetra Samachara

Kshetra Samachara

04/08/2026 07:39 pm

Cinque Terre

180

Cinque Terre

0

ಸಂಬಂಧಿತ ಸುದ್ದಿ