ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿ: ಬಸ್ ಅವ್ಯವಸ್ಥೆ ಖಂಡಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಮನವಿ ಸಲ್ಲಿಕೆ

ಶಿರಸಿ: ವಿದ್ಯಾರ್ಥಿಗಳು ಎದುರಿಸುತ್ತಿರುವ ತೀವ್ರ ಬಸ್ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ವಿದ್ಯಾರ್ಥಿಗಳ ಸಂಘಟನೆ ವತಿಯಿಂದ ವಿಭಾಗೀಯ ನಿಯಂತ್ರಣಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ವಿಶೇಷವಾಗಿ ಶಾಲಾ-ಕಾಲೇಜು ವೇಳೆಗೆ ಸೂಕ್ತ ಬಸ್ ಸೌಕರ್ಯ ಕಲ್ಪಿಸುವಂತೆ ಚರ್ಚಿಸಿ, ತಕ್ಷಣವೇ ಸಮಸ್ಯೆ ಬಗೆಹರಿಸಲು ಒತ್ತಾಯಿಸಲಾಯಿತು. ಮನವಿಗೆ ಸ್ಪಂದಿಸಿದ ಅಧಿಕಾರಿಗಳು, ಶೀಘ್ರದಲ್ಲೇ ಸಮಸ್ಯೆ ನಿವಾರಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ಸಂಜಯ ಗಾoವಕರ,ರಿತೀಶ ಶಾನಭೋಗ,ಶಶಾಂಕ ನಾಯ್ಕ್,ಧನoಜಯ ನಾಯ್ಕ್,ನಾಗರಾಜ ದೇಶಬಂಡಾರಿ, ದರ್ಶನ ಮಡಿವಾಳ ಹಾಗೂ ಆರಕ್ಷಕ ಸಿಬ್ಬಂದಿ ಹಾಗೂ ಸಾರಿಗೆ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

04/08/2026 07:44 pm

Cinque Terre

1.98 K

Cinque Terre

0

ಸಂಬಂಧಿತ ಸುದ್ದಿ