ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಸ್ತೆಯೋ? ಕೊಳಚೆ ಗುಂಡಿಯೋ?

ಮನೆಗಳ ಮುಂದೆಯೇ ನಿಲ್ಲುತ್ತಿದೆ ಕೊಳಚೆ ನೀರು: ರೋಗ ಭೀತಿಯಲ್ಲಿ ಗದಗ ಕೌಜಗೇರಿ ವಾರ್ಡ್ ಸಂಖ್ಯೆ 1ರ ನಿವಾಸಿಗಳು

ಗದಗ : ಜಿಲ್ಲೆಯ ರೋಣ ತಾಲೂಕಿನ ಕೌಜಗೇರಿ ಗ್ರಾಮದ ವಾರ್ಡ್ ನಂಬರ್ 1 ರಲ್ಲಿನ ರಸ್ತೆಗಳು ಕೊಳಚೆಗುಂಡಿಯಾಗಿ ಮಾರ್ಪಟ್ಟಿದ್ದು, ತಕ್ಷಣವೇ ಕಾಂಕ್ರೀಟ್ (ಸಿಸಿ) ರಸ್ತೆ ನಿರ್ಮಿಸಿಕೊಡುವಂತೆ ಗ್ರಾಮಸ್ಥರು ಸರ್ಕಾರ ಹಾಗೂ ಜನಪ್ರತಿನಿಧಿಗಳನ್ನು ಒತ್ತಾಯಿಸಿದ್ದಾರೆ.

ಗ್ರಾಮದ ಮನೆಗಳ ಎದುರಲ್ಲೇ ಕಲುಷಿತ ನೀರು ನಿಲ್ಲುತ್ತಿದ್ದು, ಅದೇ ರಸ್ತೆಯಲ್ಲೇ ನಿತ್ಯ ಓಡಾಡಬೇಕಾದ ದುಸ್ಥಿತಿ ಎದುರಾಗಿದೆ. ಇದರಿಂದಾಗಿ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗಿದ್ದು, ಮಕ್ಕಳು, ಮಹಿಳೆಯರು ಹಾಗೂ ವೃದ್ಧರು ಸಂಚರಿಸಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

"2010 ರಿಂದಲೂ ಈ ಭಾಗದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸುವಂತೆ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಸಾಲು ಸಾಲು ಮನವಿ ಸಲ್ಲಿಸಿದರೂ ಯಾರೊಬ್ಬರೂ ಸ್ಪಂದಿಸಿಲ್ಲ. ತಕ್ಷಣವೇ ರಸ್ತೆ ಅಭಿವೃದ್ಧಿ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು" ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.

Edited By :
PublicNext

PublicNext

04/08/2026 08:17 pm

Cinque Terre

16.65 K

Cinque Terre

1