ಎನ್.ಆರ್ ಪುರ: ಹಸುವೊಂದು ತೋಟಕ್ಕೆ ನುಗ್ಗಿ ಗಿಡಗಳನ್ನು ಹಾಳುಮಾಡಿದ್ದನ್ನು ಪ್ರಶ್ನಿಸಿದ ದಂಪತಿ ಮೇಲೆ ಕತ್ತಿ ಹಾಗೂ ದೊಣ್ಣೆಯಿಂದ ಭೀಕರವಾಗಿ ಹಲ್ಲೆ ನಡೆಸಿರುವ ಗಂಭೀರ ಆರೋಪವೊಂದು ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಳಿ ಬಂದಿದೆ.
ದಂಪತಿ ನೆರೆಮನೆಯ ಶಶಿಕಿರಣ್ ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ದೂರು ನೀಡಲಾಗಿದೆ. ಹಸು ಪ್ರತಿನಿತ್ಯ ನೆರೆಮನೆಯವರ ತೋಟಕ್ಕೆ ನುಗ್ಗಿ ಕಾಫಿ ಹಾಗೂ ಬಾಳೆ ಗಿಡಗಳನ್ನು ತಿಂದು ಹಾಳು ಮಾಡುತ್ತಿತ್ತು ಎನ್ನಲಾಗಿದೆ. ಇದನ್ನು ಕಂಡು ಹಸುವನ್ನು ಓಡಿಸಲು ಹೋದಾಗ, ಶಶಿಕಿರಣ್ ಆಕ್ರೋಶಗೊಂಡು ಗಲಾಟೆ ತೆಗೆದಿದ್ದಾನೆ ಎಂದು ದೊರಲಾಗಿದ್ದು ಮನೆ ಮುಂಭಾಗದ ರಸ್ತೆಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈಯಲ್ಲಿ ಕತ್ತಿ ಹಾಗೂ ದೊಣ್ಣೆ ಹಿಡಿದುಕೊಂಡು ಬಂದು ಕತ್ತಿಯಿಂದ ಹಲ್ಲೆ ನಡೆಸಿ ತಲೆಯ ಹಿಂಭಾಗಕ್ಕೆ ರಕ್ತಗಾಯವನ್ನುಂಟು ಮಾಡಿ ದೊಣ್ಣೆಯಿಂದ ಬೆನ್ನಿಗೆ ಹಾಗೂ ಕಾಲಿಗೆ ಹೊಡೆಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ವೇಳೆ ಜಗಳ ಬಿಡಿಸಲು ಬಂದ ಹೆಂಡತಿ ಆಶಾರಾಣಿ ಅವರ ಮೇಲೆಯೂ ದೊಣ್ಣೆಯಿಂದ ಹಲ್ಲೆ ನಡೆಸಿ ಕೈ ಹಾಗೂ ಬೆನ್ನಿಗೆ ನೋವುಂಟು ಮಾಡಲಾಗಿದೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಲಾಗಿದೆ ಗಂಭೀರವಾಗಿ ಗಾಯಗೊಂಡ ದಂಪತಿ ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ನೀಡಿದ ದೂರಿನ ಮೇರೆಗೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
04/08/2026 09:58 pm
LOADING...