ಚಿಕ್ಕಮಗಳೂರು: ಜಿಲ್ಲೆಯ ಎಲ್ಲಾ ಎಲ್‌ಪಿಜಿ (LPG) ಗ್ಯಾಸ್ ಗ್ರಾಹಕರು ತಮ್ಮ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಆಗಸ್ಟ್ 15ರೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಗ್ರಾಹಕರ ಗುರುತಿನ ಪರಿಶೀಲನೆ, ಅರ್ಹ ಫಲಾನುಭವಿಗಳ ನಿಖರ ದಾಖಲೆಗಳ ನಿರ್ವಹಣೆ ಹಾಗೂ ಎಲ್‌ಪಿಜಿ ಪೂರೈಕೆಯನ್ನು ನಿರಂತರವಾಗಿ ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಗ್ರಾಹಕರು ಮೊಬೈಲ್ ಅಪ್ಲಿಕೇಶನ್ ಮೂಲಕ ಸ್ವತಃ ಇ-ಕೆವೈಸಿ ಮಾಡಿಕೊಳ್ಳಬಹುದಾಗಿದ್ದು, ಅಥವಾ ಸಂಬಂಧಿತ ಗ್ಯಾಸ್ ಏಜೆನ್ಸಿಗೆ ನೇರವಾಗಿ ಭೇಟಿ ನೀಡಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.
ನಿಗದಿತ ಆಗಸ್ಟ್ 15ರೊಳಗೆ ಇ-ಕೆವೈಸಿ ಪೂರ್ಣಗೊಳಿಸದ ಗ್ರಾಹಕರ ಎಲ್‌ಪಿಜಿ ಸಂಪರ್ಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
PublicNext
04/08/2026 10:53 pm
LOADING...