ರಾಮನಗರ: ಜಿಲ್ಲೆಯ ಪ್ರಸಿದ್ಧ ಚಾಮುಂಡೇಶ್ವರಿ ಕರಗ ಮಹೋತ್ಸವದ ವೇದಿಕೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾಷಣ ಮಾಡಲು ಆರಂಭಿಸುತ್ತಿದ್ದಂತೆಯೇ ನಟ ದರ್ಶನ್ ಅಭಿಮಾನಿಗಳು ನಿರಂತರವಾಗಿ ‘ಡಿ ಬಾಸ್, ಡಿ ಬಾಸ್’ ಎಂದು ಘೋಷಣೆ ಕೂಗಿ ಅಡಚಣೆ ಉಂಟುಮಾಡಿದ ಘಟನೆ ನಡೆದಿದೆ.
ಅಭಿಮಾನಿಗಳ ಅತಿಯಾದ ಜೈಕಾರ ಹಾಗೂ ಗೊಂದಲದಿಂದಾಗಿ ಮುಖ್ಯಮಂತ್ರಿಗಳು ಕೆಲಕಾಲ ತಮ್ಮ ಭಾಷಣವನ್ನು ಸ್ಥಗಿತಗೊಳಿಸಿ ಪರಿಸ್ಥಿತಿಯನ್ನು ಸಮಾಧಾನಪಡಿಸಲು ಯತ್ನಿಸಿದರು.
ವೇದಿಕೆಯಲ್ಲಿ ಮುಖ್ಯಮಂತ್ರಿಗಳು ಮೈಕ್ ಹಿಡಿಯುತ್ತಿದ್ದಂತೆಯೇ ಸಭೆಯಲ್ಲಿದ್ದ ದರ್ಶನ್ ಅಭಿಮಾನಿಗಳ ಘೋಷಣೆ ಜೋರಾಯಿತು. ಹಲವು ಬಾರಿ ಸಮಾಧಾನಪಡಿಸಲು ಪ್ರಯತ್ನಿಸಿದರೂ ಜೈಕಾರಗಳು ಮುಂದುವರಿದ ಕಾರಣ ಸಿಎಂ ಹಲವು ಬಾರಿ ಕುರ್ಚಿಯಿಂದ ಎದ್ದು ಮತ್ತೆ ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಯಿತು.
ವೇದಿಕೆಯಲ್ಲಿದ್ದ ನಾಯಕರು ಹಾಗೂ ಆಯೋಜಕರು ಅಭಿಮಾನಿಗಳನ್ನು ಶಾಂತಗೊಳಿಸಲು ಮನವಿ ಮಾಡಿದರಲ್ಲದೆ, ಸಭೆಯಲ್ಲಿ ಪಟಾಕಿ ಸಿಡಿಸದಂತೆ ವಿನಂತಿಸಿಕೊಂಡರು. ಪರಿಸ್ಥಿತಿ ತಕ್ಕಮಟ್ಟಿಗೆ ನಿಯಂತ್ರಣಕ್ಕೆ ಬಂದ ಬಳಿಕ ಸಿಎಂ ತಮ್ಮ ಭಾಷಣವನ್ನು ಮುಂದುವರಿಸಿದರು.
ನಿರಂತರ ಘೋಷಣೆ ಕೂಗುತ್ತಿದ್ದ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್
ನಾನು ಕೋರ್ಟ್ನಲ್ಲಿರುವ ವಿಚಾರ ಮಾತನಾಡಲ್ಲ, ನೀವು ದೇವರಲ್ಲಿ ಪ್ರಾರ್ಥನೆ ಮಾಡಿ, ನಿಮ್ಮ ಭಾವನೆ ನನಗೆ ಅರ್ಥವಾಗಲಿದೆ. ಪ್ರಯತ್ನ ವಿಫಲವಾಗಬಹುದು, ಪ್ರಾರ್ಥನೆ ವಿಫಲವಾಗಲ್ಲ. ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಮಾಡಿ ಎಂದು ದರ್ಶನ್ ಫ್ಯಾನ್ಸ್ಗೆ ಮನವಿ ಮಾಡಿದರು.
PublicNext
05/08/2026 09:06 am
LOADING...