ಯಾದಗಿರಿ: ಸಿಲ್ ಲ್ಯಾಬೋರೇಟರಿ ಕಂಪನಿಯಲ್ಲಿ ಭಾರೀ ಗ್ಯಾಸ್ ಸ್ಫೋಟ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಡೇಚೂರು ಬಳಿಯ ಸೀಲ್ ಲ್ಯಾಬೋರೇಟರಿ ಕಂಪನಿಯಲ್ಲಿ ಈ ದುರ್ಘಟನೆ ನಡೆದಿದೆ.
ಘಟನೆಯಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಇನ್ನೂ ನಾಲ್ವರ ಸ್ಥಿತಿ ಗಂಭೀರವಾಗಿದೆ.
ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಈ ಗ್ಯಾಸ್ ದುರಂತ ಸಂಭವಿಸಿದೆ. ಒಟ್ಟು 7 ಜನರ ಪೈಕಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಮೃತರೆಲ್ಲರೂ ಬಿಹಾರ ಮೂಲದ ಕಾರ್ಮಿಕರು ಎಂದು ತಿಳಿದುಬಂದಿದೆ. ಇನ್ನುಳಿದ ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳನ್ನು ರಾಯಚೂರಿನ ರಿಮ್ಸ್ (RIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
PublicNext
05/08/2026 09:58 am
LOADING...