ಕೂಡ್ಲಿಗಿ : ಅಪಘಾತಕ್ಕೆ ಒಳಗಾಗಿ ಸಾವು - ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದವರನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಈ ಘಟನೆ ಚಿತ್ರದುರ್ಗ ಜಿಲ್ಲೆಯ ಕಳ್ಳಂಬೆಳ್ಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಮಲ್ಲೇಶಪ್ಪ ದೊಡ್ಡಮನಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ DySP ಆಗಿದ್ದು, ಖಾಸಗಿ ಕಾರ್ಯದ ನಿಮಿತ್ತ ಬೆಂಗಳೂರಿಗೆ ತೆರಳುವ ವೇಳೆ ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಗೆ ಬರುವ ಗ್ರಾಮದ ಬಳಿ ನಡೆದಿದ್ದ ಭೀಕರ ಅಪಘಾತ ಕಂಡು ಕೂಡಲೇ ಸ್ಥಳಕ್ಕೆ ಧಾವಿಸಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದವರನ್ನು ಆಸ್ಪತ್ರೆಗೆ ಸೇರಿಸಿ ಸೂಕ್ತ ಚಿಕಿತ್ಸೆ ಕೊಡಿಸಿದ್ದಾರೆ. DySP ಕಾರ್ಯಕ್ಕೆ ಮೆಚ್ಚುಗೆ ಮಹಾಪೂರ ಹರಿದು ಬರುತ್ತಿದೆ.
PublicNext
05/08/2026 10:26 am
LOADING...