ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸ್ವಾತಂತ್ರ್ಯ ದಿನಾಚರಣೆಗೆ ಅಚ್ಚುಕಟ್ಟಾದ ಸಿದ್ಧತೆ: ಡಿಸಿ ಎಂ.ಆರ್. ರವಿಕುಮಾರ್ ಸೂಚನೆ

ಕೋಲಾರ : ಆಗಸ್ಟ್ 15ರಂದು ನಡೆಯಲಿರುವ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕು ಮಟ್ಟದಲ್ಲಿಯೂ ಶಾಸಕರು, ತಹಶೀಲ್ದಾರರು ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಆಯೋಜಿಸಲು ನಿರ್ದೇಶನ ನೀಡಿದರು.

ಸ್ವಾತಂತ್ರ್ಯ ದಿನಾಚರಣೆಯ ಯಶಸ್ವಿಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಪೆರೇಡ್ ಸಮಿತಿ, ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಸ್ವಾಗತ ಸಮಿತಿ, ಡಿಡಿಪಿಐ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಿತಿ ಹಾಗೂ ಆಹಾರ, ವೇದಿಕೆ ಮತ್ತು ಸ್ವಚ್ಛತಾ ಸಮಿತಿಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.

ಎಲ್ಲ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಸ್ವಾತಂತ್ರ್ಯ ದಿನಾಚರಣೆಯನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

Edited By : PublicNext Desk
PublicNext

PublicNext

05/08/2026 11:53 am

Cinque Terre

1.08 K

Cinque Terre

0

ಸಂಬಂಧಿತ ಸುದ್ದಿ