ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

KPSC ವಿರುದ್ಧ ABVP ಅನಿರ್ದಿಷ್ಟಾವಧಿ ಪ್ರೊಟೆಸ್ಟ್

ಬೆಂಗಳೂರು: KPSC ಹಗರಣವನ್ನು ಸಿಬಿಐ (CBI) ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ABVP ಇಂದಿನಿಂದ ಫ್ರೀಡಂ ಪಾರ್ಕ್‌ನಲ್ಲಿ ಬೆಳಿಗ್ಗೆ 11:30ಕ್ಕೆ ಅನಿರ್ದಿಷ್ಟಾವಧಿ ಧರಣಿ ನಡೆಸಲಿದೆ.

ಕರ್ನಾಟಕ ಲೋಕಸೇವಾ ಆಯೋಗವು (KPSC) 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿ ಜುಲೈ 17ರಂದು ಫಲಿತಾಂಶ ಪ್ರಕಟಿಸಿತ್ತು. ಆದರೆ ಈ ಪರೀಕ್ಷೆಯಲ್ಲಿ OMR ಶೀಟ್ ತಿದ್ದಿರುವ ಮತ್ತು ಒಂದು ಹುದ್ದೆಗೆ ಬರೋಬ್ಬರಿ ₹80 ಲಕ್ಷಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ.

ನಂತರ ಈ ಹಗರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಆಗ್ರಹಿಸಿ ABVP ಪತ್ರಿಕಾಗೋಷ್ಠಿ ನಡೆಸಿ ಸರ್ಕಾರಕ್ಕೆ ಆಗಸ್ಟ್ 4ರವರೆಗೆ ಗಡುವು ನೀಡಿತ್ತು. ಸರ್ಕಾರದಿಂದ ಯಾವುದೇ ಪೂರಕ ಪ್ರತಿಕ್ರಿಯೆ ಬರದೇ ಇರುವ ಕಾರಣ, ಅನಿರ್ದಿಷ್ಟಾವಧಿ ಪ್ರತಿಭಟನೆ ಇಂದಿನಿಂದ ಆರಂಭವಾಗಲಿದೆ.

Edited By : Nirmala Aralikatti
Kshetra Samachara

Kshetra Samachara

05/08/2026 12:55 pm

Cinque Terre

104

Cinque Terre

0

ಸಂಬಂಧಿತ ಸುದ್ದಿ