ರಾಜ್ಯ: ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ನಿನ್ನೆ ಸಾಧಾರಣ ಮಳೆಯಾಗಿದೆ. ಇಂದು ಕೂಡ ಹವಾಮಾನ ಇಲಾಖೆಯು ರಾಜ್ಯದ 6 ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್'ಘೋಷಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯಲಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿಯ ವೇಳೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
PublicNext
05/08/2026 12:59 pm
LOADING...