ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಳೆ ಕೊರತೆ! ಬೆಳೆ ಹಾನಿ ಪರಿಶೀಲನೆ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಬಗ್ಗೆ ಜಿಲ್ಲಾಧಿಕಾರಿ ಎಂ. ಸಂಗಪ್ಪ ಪರಿಶೀಲನೆ ನಡೆಸಿದ್ದಾರೆ. ಜಿಲ್ಲೆಯ ಗುಳೇಡಗುಡ್ಡ, ಬಾದಾಮಿ, ಹುನಗುಂದ ತಾಲೂಕಿನ ವಿವಿಧ ಗ್ರಾಮಗಳ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿದ್ದಾರೆ.

ರೈತರು ಬೆಳೆದ ಹೆಸರು, ಸೂರ್ಯಕಾಂತಿ ಹಾಗೂ ತೊಗರಿ ಬೆಳೆಗಳನ್ನು ವೀಕ್ಷಿಸಿದರು. ಈ ವೇಳೆ ರೈತರೊಂದಿಗೆ ನೇರವಾಗಿ ಮಾತುಕತೆ ನಡೆಸಿ, ಅವರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಬೆಳೆ ನಷ್ಟದ ಕುರಿತು ಮಾಹಿತಿ ಪಡೆದುಕೊಂಡರು.

ಈ ವೇಳೆ ಜಂಟಿ ಕೃಷಿ ನಿರ್ದೇಶಕ ಟಿ. ಎಸ್. ರುದ್ರೇಶಪ್ಪ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ರವೀಂದ್ರ ಹಕಾಟಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Edited By :
PublicNext

PublicNext

05/08/2026 01:22 pm

Cinque Terre

4.32 K

Cinque Terre

0

ಸಂಬಂಧಿತ ಸುದ್ದಿ