ತರೀಕೆರೆ: ರಾಜ್ಯ ಸಂಪುಟ ವಿಸ್ತರಣೆ ಮತ್ತು ಸಚಿವ ಸ್ಥಾನದ ಹಂಚಿಕೆ ವಿಚಾರದಲ್ಲಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಆಕ್ರೋಶ ಭುಗಿಲೆದ್ದಿದೆ. ಸ್ಥಳೀಯ ಶಾಸಕ ಜಿ. ಎಚ್. ಶ್ರೀನಿವಾಸ್ ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನ ನೀಡದಿರುವುದನ್ನು ಖಂಡಿಸಿ ಅವರ ಅಭಿಮಾನಿಗಳು ಹಾಗೂ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿ ತಮ್ಮ ರೋಷ ವ್ಯಕ್ತಪಡಿಸಿದ್ದಾರೆ.
ತರೀಕೆರೆಯ ಸಾಲು ಮರದಮ್ಮ ದೇಗುಲದಿಂದ ಆರಂಭವಾದ ಈ ಪ್ರತಿಭಟನಾ ಮೆರವಣಿಗೆ ಎಂ. ಜಿ. ವೃತ್ತದವರೆಗೆ ಸಾಗಿ ಆಕ್ರೋಶದ ಘೋಷಣೆಗಳನ್ನು ಕೂಗಿದರು. ಈ ವೇಳೆ ರಸ್ತೆಯಲ್ಲೇ ಟೈರ್‌ಗೆ ಬೆಂಕಿ ಹಚ್ಚಿದ ಬೆಂಬಲಿಗರು, ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದರು. ಚಿಕ್ಕಮಗಳೂರು ಜಿಲ್ಲೆಗೆ ಸಚಿವ ಸ್ಥಾನದ ಪ್ರಾತಿನಿಧ್ಯ ನೀಡಲೇಬೇಕು, ಅದರಲ್ಲಿಯೂ ಜನಪ್ರಿಯ ಶಾಸಕ ಜಿ. ಎಚ್. ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ತಪ್ಪಿಸಬಾರದು ಎಂದು ಪಟ್ಟು ಹಿಡಿದಿದ್ದಾರೆ. ಹೈಕಮಾಂಡ್ ತಕ್ಷಣವೇ ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಕಾಂಗ್ರೆಸ್ ಕಾರ್ಯಕರ್ತರು ಎಚ್ಚರಿಸಿದ್ದಾರೆ.
PublicNext
05/08/2026 02:01 pm
LOADING...