ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಸಮೀಪ ಬುಲೆರೋ ವಾಹನ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಘಟನೆಯಲ್ಲಿ ಐವರು ಗಾಯಗೊಂಡ ಘಟನೆ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಂಡೆ ತಿಮ್ಲಾಪುರ ಗ್ರಾಮದಿಂದ ಟೊಮೆಟೊ ಸಾಗಿಸಿ ಬೆಂಗಳೂರಿನ ಮಾರುಕಟ್ಟೆಗೆ ತೆರಳಿ, ಅಲ್ಲಿಂದ ಮರಳಿ ಗ್ರಾಮಕ್ಕೆ ಬರುತ್ತಿದ್ದ ಬುಲೆರೋ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಅಂಬ್ಯುಲೆನ್ಸ್‌ನ ಇಬ್ಬರು ಸಿಬ್ಬಂದಿ ಹಾಗೂ ಬುಲೆರೋ ವಾಹನದಲ್ಲಿದ್ದ ಮೂವರು ಸೇರಿ ಒಟ್ಟು 5 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಚಳ್ಳಕೆರೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
05/08/2026 02:04 pm
LOADING...