ಬೆಂಗಳೂರು: ಕೊಲೆ, ಕೊಲೆ ಯತ್ನ, ರಾಬರಿ ಪ್ರಕರಣಗಳಲ್ಲಿ ಬೇಕಾಗಿದ್ದ ಕುಖ್ಯಾತ ರೌಡಿಶೀಟರ್ ಜೆಕೆ @ ಕಾರ್ತಿಕ್ ಎಂಬಾತನನ್ನು ಬಂಧಿಸಿರುವ ಘಟನೆ ನಿನ್ನೆ ಆನೇಕಲ್‌ನಲ್ಲಿ ನಡೆದಿದೆ.
ಎರಡು ಕೊಲೆ, ಒಂದು ಕೊಲೆ ಯತ್ನ ಮತ್ತು ಮೂರು ರಾಬರಿ ಪ್ರಕರಣಗಳಲ್ಲಿ ಕೋರ್ಟ್‌ಗೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಆನೇಕಲ್ ಕೋರ್ಟ್ ಆರೋಪಿಯ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿತ್ತು. ಆರೋಪಿಯ ಪತ್ತೆಗಾಗಿ ಆನೇಕಲ್ ಪೊಲೀಸರು ಶೋಧ ನಡೆಸಿದ್ದರು. ಆದರೆ ಈತ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡು ಓಡಾಡುತ್ತಿದ್ದನು.
ನಿನ್ನೆ ಖಚಿತ ಮಾಹಿತಿ ಮೇರೆಗೆ ಆನೇಕಲ್ ಸಮೀಪದ ಹೊಸೂರು ರಸ್ತೆ ಬಳಿ ಪೊಲೀಸರು ಜೆಕೆ @ ಕಾರ್ತಿಕ್‌ನನ್ನು ಬಂಧಿಸಿದ್ದಾರೆ. ಬಂಧನದ ಬಳಿಕ ಆತನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದಾರೆ. ಪ್ರಸ್ತುತ ಆರೋಪಿಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.
PublicNext
05/08/2026 03:21 pm
LOADING...