ಸಿದ್ದಾಪುರ : ಕುಡಿಯುವ ನೀರಿಗಾಗಿ ದಲಿತ ಕುಟುಂಬವೊಂದು ಕಳೆದ ಹತ್ತು ವರ್ಷಗಳಿಂದ ಸಂಕಷ್ಟ ಅನುಭವಿಸುತ್ತಿದೆ. ಸಂಬಂಧಪಟ್ಟ ಎಲ್ಲ ಇಲಾಖೆಗಳಿಗೂ ಮನವಿ ಸಲ್ಲಿಸಿದರೂ ಇದುವರೆಗೆ ಶಾಶ್ವತ ಪರಿಹಾರ ದೊರೆತಿಲ್ಲ. ಸಿದ್ದಾಪುರ ತಾಲೂಕಿನ ಕಾನಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಣೇಶನಗರದ ಜಯಶೀಲ ಕಾನಡೆ ಮತ್ತು ಸವಿತಾ ಕಾನಡೆ ಕುಟುಂಬದ ನೋವಿನ ಕಥೆಯಿದು.
ಆಗಸ್ಟ್ 15ರೊಳಗೆ ಸಮಸ್ಯೆಗೆ ಪರಿಹಾರ ಕಲ್ಪಿಸದಿದ್ದರೆ ಸಿದ್ದಾಪುರ ತಾಲೂಕಿನ ಎಲ್ಲಾ ದಲಿತ ಸಂಘಟನೆಗಳು ಸೇರಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿವೆ.
“ನಾವು ದಲಿತರು ಎಂಬ ಕಾರಣಕ್ಕೆ ಅನ್ಯಾಯ ಮಾಡಲಾಗುತ್ತಿದೆ” ಎಂದು ಕುಟುಂಬದವರು ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ.
ಸರ್ಕಾರದಿಂದ ಅನುದಾನ ಮಂಜೂರಾದರೂ ಬಾವಿ ನಿರ್ಮಾಣ ಮಾಡಿಕೊಟ್ಟಿಲ್ಲ. ಸ್ಥಳೀಯರ ತಕರಾರು ಇದೆ ಎಂಬ ಕಾರಣವನ್ನು ಹೇಳಿ ಅಧಿಕಾರಿಗಳು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.
ಒಟ್ಟಾರೆ, ಕುಡಿಯುವ ನೀರಿಗಾಗಿ ಈ ಕುಟುಂಬ ದಿನನಿತ್ಯ ತೀವ್ರ ಸಂಕಷ್ಟ ಅನುಭವಿಸುತ್ತಿರುವುದು ದುಃಖಕರ ಸಂಗತಿಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
PublicNext
05/08/2026 03:34 pm
LOADING...