ಕೂಡ್ಲಿಗಿ : ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಹೆಚ್ಚಳವಾಗಿದೆ. ಇತ್ತ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಪೈಪ್‌ಲೈನ್ ಮೂಲಕ ನೀರು ಹರಿಸಲಾಗುತ್ತಿದ್ದು, ತಾಲೂಕಿನ ರೈತರಲ್ಲಿ ಸಂತಸದ ವಾತಾವರಣ ಮೂಡಿದೆ.
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಒಟ್ಟು 74 ಕೆರೆಗಳಿದ್ದು, ಆ ಎಲ್ಲಾ ಕೆರೆಗಳಿಗೂ ಪೈಪ್‌ಲೈನ್ ಮೂಲಕ ನೀರು ಹರಿಸಲು ಜಲಸಂಪನ್ಮೂಲ ಇಲಾಖೆ ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಿದ್ದರು. ಇದೀಗ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಯೋಜನೆಯಂತೆ ಕೆರೆಗಳಿಗೆ ನೀರು ಹರಿಸುವ ಕಾರ್ಯ ಭರದಿಂದ ಸಾಗಿದೆ.
PublicNext
05/08/2026 04:08 pm
LOADING...