ಧಾರವಾಡ: ಮಳೆಯ ಕೊರತೆಯಿಂದ ಬೆಳೆ ಹಾನಿಗೊಳಗಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗಳಿಗೆ ತಕ್ಷಣ ಸರಕಾರ ಸ್ಪಂದಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರೈತ ಮುಖಂಡರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರೈತ ಮುಖಂಡ ಮಲ್ಲಿಕಾರ್ಜುನ ಬಾಳನಗೌಡರ ನೇತೃತ್ವದಲ್ಲಿ ತಾವು ಬೆಳೆದ ಬೆಳೆಗಳನ್ನು ಕಿತ್ತು ತಂದು ಜಿಲ್ಲಾಧಿಕಾರಿ ಕಚೇರಿ ಎದುರು ಸುರಿದು, ಬೆಳೆ ಹಾನಿಯಾಗಿ ರೈತರಿಗೆ ಎದುರಾಗಿರುವ ಸಂಕಷ್ಟವನ್ನು ಮನವರಿಕೆ ಮಾಡಿದರು.
ಧಾರವಾಡ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯ ಅಭಾವದಿಂದ ಸೋಯಾಬಿನ್, ಉದ್ದು, ಹೆಸರು, ಶೇಂಗಾ, ಮೆಕ್ಕೆಜೋಳ ಹಾಗೂ ಈರುಳ್ಳಿ ಬೆಳೆಗಳು ತೀವ್ರ ಹಾನಿಗೊಳಗಾಗಿವೆ.
ರಾಜ್ಯ ಸರ್ಕಾರ ಕೂಡಲೇ ಬೆಳೆ ಹಾನಿ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ಘೋಷಿಸಬೇಕು.
ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಕೃಷಿ ಸಚಿವರು ರೈತರ ಸಂಕಷ್ಟಕ್ಕೆ ಸ್ಪಂದಿಸಿ ಅಗತ್ಯ ನೆರವು ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯ ಬಳಿಕ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
05/08/2026 04:29 pm
LOADING...