ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೌಡಳ್ಳಿ ಕೆರೆ ಹಾನಿ ಪ್ರದೇಶಕ್ಕೆ ಶಾಸಕ ಭೀಮಣ್ಣ ನಾಯ್ಕ ಭೇಟಿ: ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳಿಗೆ ಕ್ಲಾಸ್.!

ಶಿರಸಿ: ತಾಲೂಕಿನ ಗೌಡಳ್ಳಿ ಕೆರೆಯ ಬಳಿ ಮಳೆಯಿಂದ ತೀವ್ರ ಹಾನಿಗೊಳಗಾದ ಪ್ರದೇಶಕ್ಕೆ ಶಿರಸಿ ಸಿದ್ದಾಪುರ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯ್ಕ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳ ಪರಿಶೀಲನೆ ನಡೆಸಿದ ವೇಳೆ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಶಾಸಕರು, ಸ್ಥಳದಲ್ಲಿದ್ದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಕಾಮಗಾರಿ ಮತ್ತು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಹಾನಿಗೊಳಗಾದ ಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶದ ದುರಸ್ತಿ ಕಾರ್ಯವನ್ನು ತಕ್ಷಣವೇ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಸಾರ್ವಜನಿಕರಿಗೆ ಮತ್ತು ರೈತರಿಗೆ ತೊಂದರೆಯಾದರೆ ನಾನು ಸುಮ್ಮನೆ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. ತಕ್ಷಣವೇ ಈ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಿ, ಕೈಗೊಂಡ ಕ್ರಮಗಳ ಕುರಿತು ನನಗೆ ಮಾಹಿತಿ ನೀಡಬೇಕು" ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟುವಾಗಿ ಸೂಚನೆ ನೀಡಿದರು.

Edited By :
Kshetra Samachara

Kshetra Samachara

05/08/2026 04:37 pm

Cinque Terre

2.84 K

Cinque Terre

0

ಸಂಬಂಧಿತ ಸುದ್ದಿ