ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ : ಕೈಯಲ್ಲಿ ಮಾರಕಾಸ್ತ್ರ ಹಿಡಿದು ವೀಡಿಯೋ ಶೂಟ್, ಗ್ರಾಮಸ್ಥರಲ್ಲಿ ತೀವ್ರ ಭಯದ ವಾತಾವರಣ

ಹುಬ್ಬಳ್ಳಿ : ಮಹಮ್ಮದ್ ರಫೀಕ್ ಎಂಬ ಯುವಕನೊಬ್ಬ ಕೈಯಲ್ಲಿ ಮಾರಕ ಲಾಂಗ್ ಹಿಡಿದು, ಹಿಂದೆ ಹುಡುಗರನ್ನು ನಿಲ್ಲಿಸಿಕೊಂಡು ರೀಲ್ಸ್ ಮಾಡುವ ಮೂಲಕ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕರಡಿಕೊಪ್ಪ ಗ್ರಾಮದಲ್ಲಿ ನಡೆದಿದೆ.

ಹುಬ್ಬಳ್ಳಿ ತಾಲೂಕಿನ ಕರಡಿಕೊಪ್ಪ ನಿವಾಸಿಯಾಗಿರುವ ಮಹಮ್ಮದ್ ರಫೀಕ್ ಅಬ್ದುಲ್‌ಸಾಬ್ ಗದಗ ಎಂಬಾತ ತನ್ನ ಸಾಮಾಜಿಕ ಜಾಲತಾಣದ ರೀಲ್ಸ್ ಹುಚ್ಚಾಟಕ್ಕಾಗಿ ಕೈಯಲ್ಲಿ ಲಾಂಗ್ ಹಿಡಿದು ವೀಡಿಯೋ ಮಾಡಿದ್ದಾನೆ. ಅಷ್ಟೇ ಅಲ್ಲದೆ, ವೀಡಿಯೋಗೆ "I am rowdy" ಎಂದು ಶೀರ್ಷಿಕೆ ಬರೆದುಕೊಂಡಿದ್ದಾನೆ.

ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಗ್ರಾಮಸ್ಥರು ಹಾಗೂ ಸಾರ್ವಜನಿಕರಲ್ಲಿ ತೀವ್ರ ಆತಂಕದ ವಾತಾವರಣ ಮೂಡಿಸಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಇಂತಹ ಪುಂಡರ ವಿರುದ್ಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಕೂಡಲೇ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

05/08/2026 04:42 pm

Cinque Terre

19.73 K

Cinque Terre

2

ಸಂಬಂಧಿತ ಸುದ್ದಿ