ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು- ಕೊಡಗಿನಲ್ಲಿ ದುರ್ಘಟನೆ

ಕೊಡಗು: ವಿದ್ಯುತ್ ತಂತಿ ತಗುಲಿ ಕಾಡಾನೆಯೊಂದು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಮಡಿಕೆಬೀಡು ಗ್ರಾಮದಲ್ಲಿ ನಡೆದಿದೆ.

ಮಾಯಾಮುಡಿ ಸಮೀಪದ ಆಪ್ಪಟ್ಟೀರ ಬೇಬಿ ಅವರಿಗೆ ಸೇರಿದ ತೋಟದಲ್ಲಿ ಈ ಘಟನೆ ಸಂಭವಿಸಿದೆ. ಆಗಸ್ಟ್ 4ರ ರಾತ್ರಿ ಆಹಾರ ಅರಸಿ ತೋಟಕ್ಕೆ ಬಂದಿದ್ದ ಅಂದಾಜು 25 ವರ್ಷದ ಗಂಡಾನೆ ವಿದ್ಯುತ್ ತಂತಿಗೆ ತಗುಲಿ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Edited By : Vinayak Patil
PublicNext

PublicNext

05/08/2026 04:51 pm

Cinque Terre

4.37 K

Cinque Terre

0

ಸಂಬಂಧಿತ ಸುದ್ದಿ