ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಶಾಲನಗರ: ಹಾರಂಗಿ ಜಲಾಶಯಕ್ಕೆ ಸಚಿವ ಪಿ.ಎಂ. ನರೇಂದ್ರ ಸ್ವಾಮಿ ಭೇಟಿ

ಕುಶಾಲನಗರ: ರಾಜ್ಯದ ನೂತನ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ. ನರೇಂದ್ರ ಸ್ವಾಮಿ, ಸಚಿವರಾದ ಬಳಿಕ ಮೊದಲ ಬಾರಿಗೆ ಕೊಡಗು ಜಿಲ್ಲೆಗೆ ಆಗಮಿಸಿ, ಕುಶಾಲನಗರ ಸಮೀಪದ ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿದರು.

ಜಲಾಶಯದಲ್ಲಿನ ನೀರಿನ ಸಂಗ್ರಹ, ಒಳಹರಿವು ಹಾಗೂ ನೀರಿನ ನಿರ್ವಹಣೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಕುಡಿಯುವ ನೀರಿಗೆ ಆದ್ಯತೆ ಹಾಗೂ ಕೃಷಿ ಬಳಕೆಯ ಉದ್ದೇಶದಿಂದ ಜಲಾಶಯದ ಪರಿಸ್ಥಿತಿಯನ್ನು ಅವಲೋಕಿಸಿದರು.

ಈ ವೇಳೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಸಚಿವರೊಂದಿಗೆ ಉಪಸ್ಥಿತರಿದ್ದು, ಜಲಾಶಯದ ಮಾಹಿತಿ ನೀಡುವುದರ ಜೊತೆಗೆ ಜನರ ಅಗತ್ಯಗಳ ಬಗ್ಗೆಯೂ ಸಚಿವರ ಗಮನ ಸೆಳೆದರು.

Edited By : Vinayak Patil
PublicNext

PublicNext

05/08/2026 04:57 pm

Cinque Terre

5.2 K

Cinque Terre

0

ಸಂಬಂಧಿತ ಸುದ್ದಿ