ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ರೈತರಿಗೆ ಉಪಟಳ ನೀಡುತ್ತಿದ್ದ ಚಿರತೆ ಸೆರೆ

ಚಾಮರಾಜನಗರ : ತಾಲೂಕಿನ ಕಾಲಿಕಾಂಬ ಕಾಲೋನಿಯಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆಯೊಂದು ಸೆರೆಸಿಕ್ಕಿದೆ.

ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಹಸು, ಮೇಕೆ ಹಾಗೂ ಕೋಳಿಗಳ ಮೇಲೆ ದಾಳಿ ನಡೆಸಿ ಬಲಿ ಪಡೆಯುತ್ತಿದ್ದ ಚಿರತೆ ಸೆರೆಸಿಕ್ಕಿರುವುದರಿಂದ ರೈತರು ಹಾಗೂ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಚಿರತೆಯ ನಿರಂತರ ಓಡಾಟದಿಂದ ಗ್ರಾಮಸ್ಥರು ಆತಂಕದಲ್ಲಿದ್ದು, ಜಾನುವಾರುಗಳನ್ನು ಮೇಯಿಸಲು ಹಾಗೂ ರಾತ್ರಿ ವೇಳೆಯಲ್ಲಿ ಓಡಾಡಲು ಭಯಪಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳೀಯರ ಮನವಿ ಮೇರೆಗೆ ಅರಣ್ಯ ಇಲಾಖೆ ಬೋನು ಅಳವಡಿಸಿತ್ತು. ಬೋನಿನಲ್ಲಿ ಚಿರತೆ ಸೆರೆಯಾಗಿರುವ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಅಗತ್ಯ ಆರೋಗ್ಯ ತಪಾಸಣೆ ನಡೆಸಿ, ಅರಣ್ಯ ಇಲಾಖೆಯ ನಿಯಮಾನುಸಾರ ಸುರಕ್ಷಿತ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Edited By : PublicNext Desk
PublicNext

PublicNext

05/08/2026 05:12 pm

Cinque Terre

726

Cinque Terre

0

ಸಂಬಂಧಿತ ಸುದ್ದಿ