ವಿಜಯಪುರ: ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ಇದೀಗ ತಮ್ಮ ನಿರ್ಧಾರವನ್ನು ಬದಲಿಸಿದ್ದು, ಶಾಸಕ ಸ್ಥಾನದ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ.
ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಹಾಗೂ ರಾಜ್ಯ ನಾಯಕರ ಸಂಧಾನದ ಬಳಿಕ ಮನವೊಲಿಕೆಗೆ ಒಪ್ಪಿರುವ ಅವರು, ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಈ ಮೂಲಕ ಇಂಡಿ ಕ್ಷೇತ್ರದಲ್ಲಿ ಹಾಗೂ ಜಿಲ್ಲೆಯ ಕಾಂಗ್ರೆಸ್ ಪಾಳಯದಲ್ಲಿ ಎದ್ದಿದ್ದ ರಾಜಕೀಯ ಬಿಕ್ಕಟ್ಟಿಗೆ ತಾತ್ಕಾಲಿಕ ತೆರೆಬಿದ್ದಂತಾಗಿದೆ.
PublicNext
05/08/2026 05:33 pm
LOADING...