ಮುಲ್ಕಿ : ಹಳೆಯಂಗಡಿ ಮಹಿಳಾ ಮಂಡಲದ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಅರುಣ್ ಪ್ರದೀಪ್ ಡಿಸೋಜಾ ಅವರಿಗೆ ಬೀಳ್ಕೊಡುಗೆ ಸಮಾರಂಭವು ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಹಿಳಾ ಮಂಡಲದ ಅಧ್ಯಕ್ಷೆ ರೇಷ್ಮಾ ಅಶ್ರಫ್ ಮಾತನಾಡಿ, "ಗ್ರಾಮಸ್ಥರ ಜೊತೆ ಉತ್ತಮ ಒಡನಾಟ ಇಟ್ಟುಕೊಂಡು ಗ್ರಾಮದ ಅಭಿವೃದ್ಧಿಗೆ ಸಹಕರಿಸಿದ ಅರುಣ್ ಪ್ರದೀಪ್ ಡಿಸೋಜಾ ಅವರ ಕಾರ್ಯವೈಖರಿ ಅಭಿನಂದನೀಯ. ಹಳೆಯಂಗಡಿಯಂತಹ ಗ್ರಾಮೀಣ ಪ್ರದೇಶಗಳಿಗೆ ಸರ್ಕಾರದ ಸವಲತ್ತುಗಳು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅವರು ಬಹಳಷ್ಟು ಶ್ರಮಪಟ್ಟಿದ್ದಾರೆ" ಎಂದರು.
ವೇದಿಕೆಯಲ್ಲಿ ಪಂಚಾಯತ್ ಮಾಜಿ ಅಧ್ಯಕ್ಷೆ ಪೂರ್ಣಿಮಾ, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಕೇಶವ್, ಮಹಿಳಾ ಮಂಡಲದ ಕೋಶಾಧಿಕಾರಿ ರಾಜೇಶ್ವರಿ ಮತ್ತಿತರರು ಉಪಸ್ಥಿತರಿದ್ದರು.
PublicNext
05/08/2026 05:38 pm
LOADING...