ಬೆಂಗಳೂರು (ಶಿವಾಜಿನಗರ): ಸಚಿವ ಬಿ.ಝೆಡ್. ಜಮೀರ್ ಅಹಮದ್ ಖಾನ್ ಅವರು ರಾಜಧಾನಿ ಬೆಂಗಳೂರಿನ ಪ್ರಸಿದ್ಧ ಜಾಮಿಯಾ ಮಸೀದಿಗೆ ಭೇಟಿ ನೀಡಿದ್ದು, ಈ ವೇಳೆ ಮಸೀದಿಯ ಆಡಳಿತ ಮಂಡಳಿ ಹಾಗೂ ಪ್ರಮುಖ ಧಾರ್ಮಿಕ ಧುರೀಣರ ಉಪಸ್ಥಿತಿಯಲ್ಲಿ ಸಚಿವರನ್ನು ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಲಾಯಿತು.
ಮಸೀದಿಯ ಮುಖ್ಯ ಇಮಾಮ್ ಮೌಲಾನಾ ಮಕ್ಸೂದ್ ಇಮ್ರಾನ್ ರಷಾದಿ ಅವರು ಸಚಿವರನ್ನು ಗೌರವಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ರಾಜ್ಯದ ವಿವಿಧ ಭಾಗಗಳ ಪ್ರಮುಖ ಮುಸ್ಲಿಂ ಮುಖಂಡರು ಭಾಗವಹಿಸಿದ್ದು ವಿಶೇಷವಾಗಿತ್ತು.
ಉತ್ತರ ಕರ್ನಾಟಕ ಹಾಗೂ ಹಳೆಯ ಮೈಸೂರು ಭಾಗದ ಪ್ರಭಾವಿ ಧಾರ್ಮಿಕ ಹಾಗೂ ರಾಜಕೀಯ ನಾಯಕರ ಸಮ್ಮುಖದಲ್ಲಿ ಈ ಭೇಟಿ ನಡೆಯಿತು. ಪ್ರಮುಖ ಧಾರ್ಮಿಕ ಪಂಡಿತರಾದ ಮೌಲಾನಾ ತನ್ವೀರ್ ಹಾಶ್ಮಿ, ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ಅನ್ವರ್ ಬಾಷಾ, ಧಾರವಾಡ ಅಂಜುಮನ್ ಎ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಹಾಗೂ ಕೊಪ್ಪಳ ನಗರಸಭೆಯ ಮಾಜಿ ಅಧ್ಯಕ್ಷ ಅಮ್ಜದ್ ಪಟೇಲ್ ಸೇರಿದಂತೆ ಅನೇಕ ಪ್ರಮುಖ ನಾಯಕರು ಸಚಿವರ ಭೇಟಿಯ ವೇಳೆ ಉಪಸ್ಥಿತರಿದ್ದು ಗೌರವ ಸಲ್ಲಿಸಿದರು.
PublicNext
05/08/2026 05:40 pm
LOADING...