ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ರೈತರ ಚಿನ್ನ ವಾಪಸ್ಸು ಕೊಡಿಸುವಂತೆ ಆಗ್ರಹಿಸಿ ರೈತರ ಪ್ರತಿಭಟನೆ

ಚಾಮರಾಜನಗರ : ಕೊಳ್ಳೇಗಾಲದ ಇಸಾಫ್ (ESAF) ಫೈನಾನ್ಸ್ ಬ್ಯಾಂಕ್‌ನಲ್ಲಿ ಗಿರಿವಿ ಇಟ್ಟಿರುವ ರೈತರ ಚಿನ್ನವನ್ನು ಕೊಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಜಿಲ್ಲಾಡಳಿತ ಭವನದ ಎದುರು ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ ಪ್ರತಿಭಟನೆ ನಡೆಸಿದರು. ಬ್ಯಾಂಕ್ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮಲೆಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರು ಗಿರಿವಿ ಇಟ್ಟಿದ್ದ ಚಿನ್ನವನ್ನು ಅನಧಿಕೃತವಾಗಿ ಕೊಳ್ಳೇಗಾಲದ ಇಸಾಫ್ ಫೈನಾನ್ಸ್ ಬ್ಯಾಂಕ್‌ಗೆ ವರ್ಗಾಯಿಸಲಾಗಿದೆ. ಜಿಲ್ಲಾಡಳಿತದ ಆದೇಶದಂತೆ ರೈತರಿಂದ ಬಾಕಿ ಹಣವನ್ನು ಪಾವತಿಸಿಕೊಂಡ ನಂತರವೂ ಚಿನ್ನವನ್ನು ವಾಪಸ್ ನೀಡುವಲ್ಲಿ ಬ್ಯಾಂಕ್ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ದೂರಿದರು.

ರೈತರ ಚಿನ್ನವನ್ನು ಕೂಡಲೇ ಹಿಂತಿರುಗಿಸಬೇಕು. ಅಲ್ಲದೆ ಈ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ರೈತರ ಚಿನ್ನ ಕೊಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಇಸಾಫ್ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಜಿಲ್ಲಾಧ್ಯಕ್ಷ ಹಾಲಿನ ನಾಗರಾಜ್, ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರಕಾಶ್ ಗಾಂಧಿ, ಪದಾಧಿಕಾರಿಗಳಾದ ಮಹೇಂದ್ರ, ಅಂಗಡಿ ಸತೀಶ್, ಗೌಡಿಕೆ ಸೋಮಣ್ಣ, ಹೊನ್ನೇಗೌಡನಹಳ್ಳಿ ಮಹೇಶ್, ಬಸವರಾಜು, ನಾಗರಾಜಪ್ಪ, ಕಿಳ್ಳಿಪುರ ಶ್ರೀಕಂಠ, ನಂದೀಶ್, ನಟರಾಜ್, ರಾಜಮ್ಮ, ಕಮಲಮ್ಮ, ಹೇಮಾ, ಶೋಭಾ, ಶೈಲಮ್ಮ, ಲೋಕಮಣಿ ಸೇರಿದಂತೆ ಇತರರು ಇದ್ದರು.

Edited By : PublicNext Desk
PublicNext

PublicNext

05/08/2026 05:42 pm

Cinque Terre

956

Cinque Terre

0