ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಜಿಲ್ಲೆಗೆ 78 ಕೋಟಿ ರೂಪಾಯಿ ಫಸಲ್ ಭೀಮಾ ಬೆಳೆ ವಿಮೆ ಬಿಡುಗಡೆ.!

ಗದಗ: ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಒಟ್ಟು 78 ಕೋಟಿ ರೂಪಾಯಿ ಬೆಳೆ ವಿಮೆ ಹಣ ಬಿಡುಗಡೆಯಾಗಿದೆ. ಮಳೆಯಿಲ್ಲದೆ ಕಂಗಾಲಾಗಿದ್ದ ರೈತರಿಗೆ ಇದರಿಂದ ಅಲ್ಪ ನಿಟ್ಟುಸಿರು ಬಿಡುವಂತಾಗಿದ್ದು, ವಿಮಾ ಪರಿಹಾರದ ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗುತ್ತಿದೆ.

ಇದು 2025-26ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ನಷ್ಟಕ್ಕೆ ಸಂಬಂಧಿಸಿದ ಪರಿಹಾರವಾಗಿದ್ದು, ಗದಗ ಜಿಲ್ಲೆಯಲ್ಲಿ ಹತ್ತಿ, ಶೇಂಗಾ, ಮೆಕ್ಕೆಜೋಳ, ಈರುಳ್ಳಿ, ತೊಗರಿ, ಭತ್ತ ಹಾಗೂ ಸಜ್ಜೆ ಬೆಳೆಗಳು ತೇವಾಂಶದ ಕೊರತೆಯಿಂದ ಸಂಪೂರ್ಣ ಒಣಗಿಹೋಗಿದ್ದವು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಗದಗ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ್ ಅವರು, "ರಾಜ್ಯ ಸರ್ಕಾರ ಈಗಾಗಲೇ ಜಿಲ್ಲೆಗೆ ವಿಮಾ ಹಣ ಮಂಜೂರು ಮಾಡಿದ್ದು, 'ಡಿಬಿಟಿ' (DBT - ನೇರ ನಗದು ವರ್ಗಾವಣೆ) ತಂತ್ರಜ್ಞಾನದ ಮೂಲಕ ಅರ್ಹ ರೈತರ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡಲಾಗುತ್ತಿದೆ" ಎಂದು ಸ್ಪಷ್ಟಪಡಿಸಿದ್ದಾರೆ.

Edited By :
Kshetra Samachara

Kshetra Samachara

05/08/2026 05:51 pm

Cinque Terre

53.42 K

Cinque Terre

0

ಸಂಬಂಧಿತ ಸುದ್ದಿ