ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿ : 3.20 ಕೋಟಿ ವೆಚ್ಚದ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡಕ್ಕೆ ಶಾಸಕ ಭೀಮಣ್ಣ ನಾಯ್ಕ ಭೂಮಿಪೂಜೆ

ಶಿರಸಿ : ತಾಲೂಕಿನ ಹುಲೇಕಲ್‌ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್ ಘಟಕದ ಸಹಯೋಗದಲ್ಲಿ ₹3.20 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ (PHC) ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ್ ಅವರು ಬುಧವಾರ ಭೂಮಿಪೂಜೆ ನೆರವೇರಿಸಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, "ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ಉಚಿತ ಆರೋಗ್ಯ ಸೇವೆ ಸಿಗಬೇಕು ಎಂಬುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಹುಲೇಕಲ್ ಹಾಗೂ ಸುತ್ತಮುತ್ತಲಿನ ಹಳ್ಳಿಗಳ ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಆಧುನಿಕ ಸೌಲಭ್ಯಗಳನ್ನೊಳಗೊಂಡ ನೂತನ ಆಸ್ಪತ್ರೆ ಕಟ್ಟಡದ ಕಾಮಗಾರಿಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗುವುದು" ಎಂದರು.

ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಅತ್ಯಂತ ಗುಣಮಟ್ಟದಿಂದ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಇಂಜಿನಿಯರಿಂಗ್ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಶಾಸಕರು ಇದೇ ವೇಳೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಇಂಜಿನಿಯರಿಂಗ್ ವಿಭಾಗದ ಸಿಬ್ಬಂದಿ ಹಾಗೂ ಹುಲೇಕಲ್ ಗ್ರಾಮದ ಪ್ರಮುಖರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Edited By : PublicNext Desk
PublicNext

PublicNext

05/08/2026 05:59 pm

Cinque Terre

1.21 K

Cinque Terre

0

ಸಂಬಂಧಿತ ಸುದ್ದಿ