ಶಿವಮೊಗ್ಗ : ಲೋಕಸಭಾ ಕ್ಷೇತ್ರದ ಮಲೆನಾಡಿನ ರೈಲು ಸಂಪರ್ಕವನ್ನು ಬಲಪಡಿಸುವ ಮಹತ್ವಾಕಾಂಕ್ಷೆಯ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ ವೇಗವಾಗಿ ಪೂರ್ಣಗೊಳ್ಳುವತ್ತ ಸಾಗಿದೆ. ಪ್ರಸಕ್ತ ಅಧಿವೇಶನದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಯೋಜನೆಯ ಪ್ರಗತಿಯ ವಿವರ ಒದಗಿಸಿದ್ದಾರೆ.
ಒಟ್ಟು ₹76.01 ಕೋಟಿ ಅಂದಾಜು ವೆಚ್ಚದ ಈ ಯೋಜನೆಗೆ ಮಾರ್ಚ್ 31, 2026ರವರೆಗೆ ₹58.82 ಕೋಟಿ ವೆಚ್ಚ ಮಾಡಲಾಗಿದ್ದು, ಶೇ. 77ಕ್ಕಿಂತ ಹೆಚ್ಚು ಹಣಕಾಸಿನ ಪ್ರಗತಿ ಸಾಧಿಸಲಾಗಿದೆ. ಇನ್ನುಳಿದ ಕಾಮಗಾರಿಗಾಗಿ ಕೇಂದ್ರ ರೈಲ್ವೆ ಸಚಿವಾಲಯವು ಪ್ರಸಕ್ತ ಸಾಲಿನಲ್ಲಿ ₹9.5 ಕೋಟಿ ಅನುದಾನ ಬಿಡುಗಡೆ ಮಾಡಿದೆ.
ಇದೇ ವೇಳೆ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ (SDCCI) ನಿಯೋಗದೊಂದಿಗೆ ಸಂಸದ ರಾಘವೇಂದ್ರ ಅವರು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ, ಶಿವಮೊಗ್ಗ ಹಾಗೂ ಬೈಂದೂರು ಭಾಗದ ರೈಲ್ವೆ ಯೋಜನೆಗಳ ತ್ವರಿತ ಜಾರಿಗೆ ಮನವಿ ಸಲ್ಲಿಸಿದರು.
ಈ ಡಿಪೋ ಪೂರ್ಣಗೊಂಡ ನಂತರ ಶಿವಮೊಗ್ಗ ಸ್ವತಂತ್ರ ರೈಲ್ವೆ ಹಬ್ ಆಗಿ ಹೊರಹೊಮ್ಮಲಿದ್ದು, ಬೆಂಗಳೂರು-ಮೈಸೂರನ್ನು ನೆಚ್ಚಿಕೊಳ್ಳದೆ ಇಲ್ಲಿಂದಲೇ ದೇಶದ ವಿವಿಧ ನಗರಗಳಿಗೆ ಹೊಸ ಎಕ್ಸ್‌ಪ್ರೆಸ್ ಹಾಗೂ ವಂದೇ ಭಾರತ್ ರೈಲುಗಳನ್ನು ಆರಂಭಿಸಲು ಹಾದಿ ಸುಗಮವಾಗಲಿದೆ ಎಂದು ತಿಳಿಸಿದರು.
PublicNext
05/08/2026 06:09 pm
LOADING...