ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿ : ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಭೀಮಣ್ಣ ನಾಯ್ಕ್ !

ಶಿರಸಿ : ತಾಲೂಕು ಪಂಚಾಯತ್ ಆವರಣದಲ್ಲಿ ಶಾಸಕ ಭೀಮಣ್ಣ ನಾಯ್ಕ್ ಅವರ ನೇತೃತ್ವದಲ್ಲಿ ತಾಲೂಕು ಪಂಚಾಯತ್ 2025-26ನೇ ಸಾಲಿನ ಅನಿರ್ಬಂಧಿತ ಅನುದಾನ ಹಾಗೂ ಜಿಲ್ಲಾ ಪಂಚಾಯತ್ ಅನುದಾನದಡಿ ವಿಶೇಷ ಚೇತನರಿಗೆ ತ್ರಿಚಕ್ರ ವಾಹನ, ಯಂತ್ರಚಾಲಿತ ಗಾಲಿ ಕುರ್ಚಿ, ಶ್ರವಣ ಸಾಧನ ಹಾಗೂ ಅಂಗನವಾಡಿ ಕಟ್ಟಡಗಳಿಗೆ ಆಹಾರ ಶೇಖರಣಾ ಡಬ್ಬಿಗಳನ್ನು ಬುಧವಾರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಬಿ. ಪಿ. ಸತೀಶ್, ಕಾರ್ಯನಿರ್ವಾಹಕ ಅಧಿಕಾರಿಗಳಾದ ಚನ್ನಬಸಪ್ಪ ಹಾವಣಗಿ, ಗ್ಯಾರಂಟಿ ಯೋಜನಾ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸತೀಶ್ ನಾಯ್ಕ್, ತಾಲೂಕು ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷೆ ಸುಮಾ ಉಗ್ರಾಣಕರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ತಾಲೂಕು ಪಂಚಾಯತ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

Edited By : PublicNext Desk
PublicNext

PublicNext

05/08/2026 06:17 pm

Cinque Terre

1.25 K

Cinque Terre

0

ಸಂಬಂಧಿತ ಸುದ್ದಿ