ಕೊಪ್ಪಳ : ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದಕ್ಕೆ ಸಚಿವ ಶಿವರಾಜ್ ತಂಗಡಗಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ರಾಘವೇಂದ್ರ ಹಿಟ್ನಾಳ್ ನಮ್ಮ ಸ್ನೇಹಿತರು. ಕೊಪ್ಪಳ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದಾರೆ. ಸಚಿವ ಸ್ಥಾನ ಆಕಾಂಕ್ಷಿಗಳ ಪೈಕಿ ಇಬ್ಬರಿಗೆ ಸಚಿವ ಸ್ಥಾನ ಸಿಕ್ಕಿದೆ ಅಂತೇಳಿದ್ರು.
ಅಷ್ಟೇ ಅಲ್ಲದೆ, ಪಕ್ಷ ಒಳ್ಳೆಯ ಸ್ಥಾನಮಾನ ನೀಡದ್ದರಿಂದ ರಾಘವೇಂದ್ರ ಹಿಟ್ನಾಳ್ ನಿರಾಸೆಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ರಾಘವೇಂದ್ರ ಹಿಟ್ನಾಳ್ ಗೆ ಒಳ್ಳೆಯ ಸ್ಥಾನಮಾನ ಸಿಗುತ್ತದೆ. ಸಿದ್ದರಾಮಯ್ಯ ಕುರುಬ ಸಮಾಜಕ್ಕೆ ಅನ್ಯಾಯ ಮಾಡಿದ್ದಾರೆ ಅನ್ನೋದಕ್ಕೂ ಹೇಳಿಕೆ ನೀಡಿದ ಅವರು, ಯಾರೋ ಸಣ್ಣ ಹುಡುಗರು ಮಾತಾಡಿದ್ರು. ಸಿದ್ದರಾಮಯ್ಯ ದೊಡ್ಡ ನಾಯಕರು. ಅವರು ಯಾರಿಗೂ ಮೋಸ ಮಾಡಿಲ್ಲ. ರಾಘಣ್ಣ ಯಾರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೋ ನನಗೆ ಗೊತ್ತಿಲ್ಲ. ನಾನು ಮಾತಾಡುತ್ತೇನೆ ಅಂತ ಸಚಿವ ಶಿವರಾಜ್ ತಂಗಡಗಿ ಹೇಳಿದ್ರು.
PublicNext
05/08/2026 06:41 pm
LOADING...