ಹಾನಗಲ್ : ತಾಲೂಕಿನ ಮಾಸನಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬುಧವಾರ ಹಾನಗಲ್ ತಹಶೀಲ್ದಾರ್ ವಿಠ್ಠಲ್ ಚೌಗುಲ ಅವರು ದಿಢೀರ್ ಭೇಟಿ ನೀಡಿ, ಶಾಲೆಯ ಬಿಸಿಯೂಟ ವ್ಯವಸ್ಥೆಯನ್ನು ಪರಿಶೀಲಿಸಿದರು.
ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ, ಅಡುಗೆ ಕೋಣೆಯ ಸ್ವಚ್ಛತೆ, ಆಹಾರ ತಯಾರಿಕೆ ವಿಧಾನ ಹಾಗೂ ಅಗತ್ಯ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೆ ತಯಾರಿಸಲಾಗಿದ್ದ ಬಿಸಿಯೂಟವನ್ನು ಸ್ವತಃ ಸವಿದು ಗುಣಮಟ್ಟವನ್ನು ಪರಿಶೀಲಿಸಿದರು.
ಶಾಲೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಹಾಗೂ ವಿದ್ಯಾರ್ಥಿಗಳಿಗೆ ಗುಣಮಟ್ಟದ, ಪೌಷ್ಟಿಕ ಆಹಾರವನ್ನು ನಿಯಮಿತವಾಗಿ ಒದಗಿಸುವಂತೆ ಸಂಬಂಧಿಸಿದ ಸಿಬ್ಬಂದಿಗೆ ತಹಶೀಲ್ದಾರ್ ಸೂಚನೆ ನೀಡಿದರು.
PublicNext
05/08/2026 06:43 pm
LOADING...