ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

"ಲಕ್ಷ್ಮಣ ಸವದಿಯವರಿಗೆ ಸಚಿವ ಸ್ಥಾನ ಸಿಕ್ಕಿದ್ದಕ್ಕೆ ಶಾಸಕ ದುರ್ಯೋಧನ ಐಹೊಳೆ ಹರ್ಷ"

ಚಿಕ್ಕೋಡಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನ ಲಭಿಸಿರುವುದು ತಮಗೆ ಅತ್ಯಂತ ಖುಷಿ ತಂದಿದೆ ಎಂದು ರಾಯಬಾಗ ಕ್ಷೇತ್ರದ ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಹೇಳಿದರು.

ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬುಧವಾರ ಚಾಲನೆ ನೀಡಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, "ಬೆಳಗಾವಿ ಜಿಲ್ಲೆಗೆ ಇನ್ನೂ ಹೆಚ್ಚಿನ ಪ್ರಾತಿನಿಧ್ಯದ ಅಗತ್ಯವಿತ್ತು. ಜಿಲ್ಲೆಗೆ ಕನಿಷ್ಠ ಮೂರು ಸಚಿವ ಸ್ಥಾನ ಸಿಗಬೇಕೆಂಬ ಅಪೇಕ್ಷೆಯಿತ್ತು. ಆದಾಗ್ಯೂ ಪ್ರಸ್ತುತ ಎರಡು ಸಚಿವ ಸ್ಥಾನಗಳು ದೊರೆತಿರುವುದು ಸಂತಸ ತಂದಿದೆ" ಎಂದರು.

ಇದೇ ವೇಳೆ ಕ್ಷೇತ್ರದ ಅಭಿವೃದ್ಧಿ ಕುರಿತು ಮಾತನಾಡಿದ ಶಾಸಕರು, "ಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ಯಾವುದೇ ರೀತಿಯ ಪಕ್ಷಪಾತ ಮಾಡುವುದಿಲ್ಲ. ರಾಯಬಾಗ ಮತ್ತು ಸುತ್ತಮುತ್ತಲಿನ ಭಾಗಗಳ ಸರ್ವಾಂಗೀಣ ಪ್ರಗತಿಗಾಗಿ ಜಿಲ್ಲೆಯ ಸಚಿವರನ್ನು ಭೇಟಿಯಾಗಿ ಹೆಚ್ಚಿನ ಅನುದಾನ ತರಲು ಶ್ರಮಿಸುತ್ತೇನೆ" ಎಂದು ಭರವಸೆ ನೀಡಿದರು.

Edited By :
PublicNext

PublicNext

05/08/2026 07:00 pm

Cinque Terre

6.65 K

Cinque Terre

0

ಸಂಬಂಧಿತ ಸುದ್ದಿ