ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅವನು ಮತ್ತು ಶ್ರಾವಣಿ' ನಟಿ ಚೈತ್ರಾ ರೆಡ್ಡಿ ಸಂಸಾರದಲ್ಲಿ ಬಿರುಗಾಳಿ..!

ಬೆಂಗಳೂರು: ಕನ್ನಡ ಹಾಗೂ ತಮಿಳು ಕಿರುತೆರೆಯ ಜನಪ್ರಿಯ ನಟಿ, 'ಅವನು ಮತ್ತು ಶ್ರಾವಣಿ' ಧಾರಾವಾಹಿ ಖ್ಯಾತಿಯ ಚೈತ್ರಾ ರೆಡ್ಡಿ ಅವರ ವೈಯಕ್ತಿಕ ಜೀವನದಲ್ಲಿ ಬಿರುಗಾಳಿ ಎದ್ದಿದೆಯಾ ಎನ್ನುವ ಶಂಕೆ ವ್ಯಕ್ತವಾಗಿದೆ. 2020ರಲ್ಲಿ ಛಾಯಾಗ್ರಾಹಕ ರಾಕೇಶ್ ಸಮಲ ಅವರನ್ನು ಅದ್ದೂರಿಯಾಗಿ ವಿವಾಹವಾಗಿದ್ದ ಚೈತ್ರಾ, ಇದೀಗ ಪತಿಯಿಂದ ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ ಎಂಬ ವದಂತಿಗಳು ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸಂಚಲನ ಸೃಷ್ಟಿಸಿವೆ.

ಅತ್ಯಂತ ಅನ್ಯೋನ್ಯವಾಗಿದ್ದ ಈ ಜೋಡಿಯ ಸಂಸಾರದಲ್ಲಿ ಬಿರುಕು ಮೂಡಿದೆ ಎಂಬ ಮಾತಿಗೆ ಚೈತ್ರಾ ಅವರ ಇನ್‌ಸ್ಟಾಗ್ರಾಮ್ ಖಾತೆ ಪುಷ್ಟಿ ನೀಡುತ್ತಿದೆ. ನಟಿ ಚೈತ್ರಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಿಂದ ಪತಿ ರಾಕೇಶ್ ಅವರೊಂದಿಗಿನ ಎಲ್ಲಾ ಫೋಟೋಗಳನ್ನು ಡಿಲೀಟ್ (Delete) ಮಾಡಿದ್ದು, ಇತ್ತೀಚಿನ ದಿನಗಳಲ್ಲಿ ತಮ್ಮ ತಂದೆಯೊಂದಿಗಿನ ಚಿತ್ರಗಳನ್ನು ಮಾತ್ರವೇ ಹಂಚಿಕೊಳ್ಳುತ್ತಿದ್ದಾರೆ.

ತಮ್ಮ ದಾಂಪತ್ಯ ಜೀವನಕ್ಕೆ ಇತಿಶ್ರೀ ಹಾಡಲು ಈ ದಂಪತಿ ನಿರ್ಧರಿಸಿದ್ದಾರಾ ಎನ್ನುವ ಪ್ರಶ್ನೆಗೆ ಮೂಲಗಳಿಂದ 'ಹೌದು' ಎಂಬ ಉತ್ತರ ಕೇಳಿಬರುತ್ತಿದೆ. ದಿಢೀರನೆ ಈ ನಿರ್ಧಾರಕ್ಕೆ ಕಾರಣವೇನು ಎಂಬುದು ಸದ್ಯಕ್ಕೆ ನಿಗೂಢವಾಗಿದ್ದು, ನಟಿಯಿಂದ ಅಧಿಕೃತ ಪ್ರಕಟಣೆ ಹೊರಬರಲು ಅಭಿಮಾನಿಗಳು ಕಾಯುತ್ತಿದ್ದಾರೆ.

Edited By :
PublicNext

PublicNext

05/08/2026 07:58 pm

Cinque Terre

5.71 K

Cinque Terre

0

ಸಂಬಂಧಿತ ಸುದ್ದಿ