ಉಡುಪಿ: ನಾಯಿಯೊಂದು ಏಕಾಏಕಿ ರಸ್ತೆಗೆ ಅಡ್ಡ ಬಂದ ಪರಿಣಾಮ ಸ್ಕೂಟರ್ ಸವಾರನೊಬ್ಬ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡ ಘಟನೆ ಕಾಪು ಫ್ಲೈಓವರ್ ಕೆಳಗಿನ ಅಂಡರ್‌ಪಾಸ್ ಸಮೀಪ ಬುಧವಾರ ಸಂಜೆ ನಡೆದಿದೆ.
ಸರ್ವಿಸ್ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ನಾಯಿಯೊಂದು ಹಠಾತ್ ರಸ್ತೆಗೆ ಓಡಿ ಬಂದಿದೆ. ಇದರಿಂದ ಸ್ಕೂಟರ್‌ನ ನಿಯಂತ್ರಣ ಕಳೆದುಕೊಂಡ ಸವಾರ ನಾಯಿಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದ್ದಾರೆ.
ಅಪಘಾತದಲ್ಲಿ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ದೃಶ್ಯ ಸಮೀಪದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
PublicNext
05/08/2026 08:28 pm
LOADING...