ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಪ್ರಚೋದನಾಕಾರಿ ಭಾಷಣ ಪ್ರಕರಣ: ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು

ಬೆಳ್ತಂಗಡಿ: ತಾಲೂಕಿನ ಕಚೇರಿ ಮುಂಭಾಗ 2015ರಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಾಕಾರಿ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಡಿಪಿಐ ರಾಷ್ಟ್ರೀಯ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆಗೆ ನ್ಯಾಯಾಲಯ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿದೆ.

2015ರ ಜುಲೈ 23ರಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಬೆಳ್ತಂಗಡಿ ವಲಯದ ವತಿಯಿಂದ ಪ್ರತಿಭಟನಾ ಸಭೆ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ಪ್ರಚೋದನಾಕಾರಿ ಭಾಷಣ ಮಾಡಿರುವ ಆರೋಪದಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 315/2015ರಡಿ ಭಾರತೀಯ ದಂಡ ಸಂಹಿತೆಯ ಕಲಂ 153(ಎ) ಹಾಗೂ 295(ಎ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಅಂದಿನ ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕ ಹಾಗೂ ತನಿಖಾಧಿಕಾರಿ ರವಿ ಬಿ.ಎಸ್. ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ರಾಮಲಿಂಗಪ್ಪ ಅವರು ಭಾರತೀಯ ದಂಡ ಸಂಹಿತೆಯ ಕಲಂ 153(ಎ) ಅಡಿಯಲ್ಲಿ ಆರೋಪಿಗೆ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಆಶಿತಾ ವಾದ ಮಂಡಿಸಿದರು.

Edited By :
Kshetra Samachara

Kshetra Samachara

05/08/2026 08:31 pm

Cinque Terre

1.86 K

Cinque Terre

0

ಸಂಬಂಧಿತ ಸುದ್ದಿ