ಬೆಳ್ತಂಗಡಿ : ಸುಮಾರು ಐದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ನಿವಾಸಿ ಮೂರ್ತಿ ಅಲಿಯಾಸ್ ಪಿಂಟು (37) ಹಲವು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ.
ಧರ್ಮಸ್ಥಳ ಪೊಲೀಸ್ ಠಾಣೆಯ ಅ.ಕ್ರ. 65/2017ರ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಲಂ 397, 395 ಹಾಗೂ 34ರಡಿ ಮೂರ್ತಿ ಆರೋಪಿಯಾಗಿದ್ದ. ಸದ್ಯ ಆತನನ್ನು ಪತ್ತೆಹಚ್ಚಿದ ಧರ್ಮಸ್ಥಳ ಪೊಲೀಸ್ ಠಾಣೆಯ ಸಿಬ್ಬಂದಿಯಾದ ವೃಷಭ ಮತ್ತು ಚರಣ್ ರಾಜ್ ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಆಗಸ್ಟ್ 5ರಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
PublicNext
05/08/2026 08:45 pm
LOADING...