ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಭೀಕರ ಅಪಘಾತ - ಬೈಕ್‌ ಗೆ ವಾಟರ್ ಟ್ಯಾಂಕರ್ ಡಿಕ್ಕಿ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎದೆಝಲ್ಲೆನಿಸುವಂತಹ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳು ಜನರನ್ನು ಬೆಚ್ಚಿಬೀಳಿಸಿವೆ. ವೈಟ್‌ಫೀಲ್ಡ್‌ನ ಬೋರ್‌ವೆಲ್ ರಸ್ತೆಯಲ್ಲಿ ನಿನ್ನೆ ಬೆಳಗಿನ ಜಾವ ಸುಮಾರು 5 ಗಂಟೆಯ ವೇಳೆಗೆ ಈ ಡೆಡ್ಲಿ ಆ್ಯಕ್ಸಿಡೆಂಟ್ ನಡೆದಿದೆ.

ಅಡ್ಡ ರಸ್ತೆಯಿಂದ ವೇಗವಾಗಿ ಬಂದ ಬೈಕ್‌ಗೆ ಎದುರಿನಿಂದ ಬಂದ ವಾಟರ್ ಟ್ಯಾಂಕರ್ ಏಕಾಏಕಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ವೈಟ್‌ಫೀಲ್ಡ್ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಾಟರ್ ಟ್ಯಾಂಕರ್ ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.

Edited By : Vinayak Patil
PublicNext

PublicNext

05/08/2026 09:45 pm

Cinque Terre

3.23 K

Cinque Terre

0

ಸಂಬಂಧಿತ ಸುದ್ದಿ